ಬೆಂಗಳೂರು: ದೇಶಕ್ಕೆ ಏನೂ ಮಾಡದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಈಗ ಒಟ್ಟಗಿ ಕೆಲಸ ಮಾಡಬೇಕು. ಜೆಡಿಎಸ್ ಅಭ್ಯರ್ಥಿ ಇದ್ದ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್ ಕಾರ್ಯಕರ್ತರು ಪ್ರಚಾರ ಮಾಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಒಡೆಯುವ ಕೆಲಸ ಮಾಡಿದರು. ಆದರೆ ನಾವು ದೇಶವನ್ನು ಒಟ್ಟುಗೂಡಿಸುವ ಕೆಲವ ಮಾಡುತ್ತೇವೆ ಎಂದು ಘೋಷಿಸಿದವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಕೇಂದ್ರ ಸರ್ಕಾರ ದೇಶದ ಜನರಲ್ಲಿ ಒಡಕನ್ನು ಉಂಟು ಮಾಡುವ ಕೆಲಸ ಮಾಡುತ್ತಿದೆ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದವರನ್ನು ಒಟ್ಟುಗೂಡಿಸುವ ಕೆಲಸ ಮಾಡಲಿದೆ ಎಂದರು..
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಾತನಾಡಿ, ಈ ಸಮಾವೇಶದ ಮೂಲಕ ದೇಶಕ್ಕೆ ಮೈತ್ರಿ ಕೂಟದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಬೇಕು ಎಂದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ರಾಜಕಾರಣದ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೂಚನೆ ಮೇರೆಗೆ 2 ಪಕ್ಷಗಳ ಜಂಟಿ ಸಮಾವೇಶ ಆಯೋಜಿಸಿದ್ದು, ದೇಶಕ್ಕೆ ಬದಲಾವಣೆಯ ಸಂದೇಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ನಾಯಕರು ಪರಿವರ್ತನಾ ಸಮಾವೇಶದಲ್ಲಿ ಭಾಗಿಯಾಗಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…