ಕಾಂಗ್ರೆಸ್‌ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ, ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ : ಮಾಯಾವತಿ -Vishwanews24

ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ‍್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್‌ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ ತಮ್ಮ 64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್‌ ಮಾರ್ಗವನ್ನೇ ಬಿಜೆಪಿ ನೇತೃತ್ವದಲ್ಲಿರುವ ಕೇಂದ್ರ ಸರಕಾರ ಅನುಸರಣೆ ಮಾಡುತ್ತಿದೆ. ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ. ಕೇಂದ್ರದ ತಪ್ಪು ನೀತಿಯಿಂದಾಗಿ ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕಾಂಗ್ರೆಸ್‌ ಕೂಡಾ ಇಂತಹದ್ದೆ ತಪ್ಪುಗಳನ್ನು ಮಾಡಿತ್ತು. ಆ ಹಿನ್ನಲೆಯಲ್ಲಿ ಕಾಂಗ್ರೆಸ್ಸನ್ನು ಜನರು ತಿರಸ್ಕಾರ ಮಾಡಿದ್ದರು” ಎಂದು ಹೇಳಿದ್ದಾರೆ.

“ಗಂಭೀರ ಸಮಸ್ಯೆಗಳಾದ ನಿರುದ್ಯೋಗ, ಹಣದುಬ್ಬರ ಮೊದಲಾದವುಗಳನ್ನು ದೇಶ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ತನ್ನ ಮೊಂಡುತನ ತೋರಿಸಬಾರದು” ಎಂದು ಹೇಳಿದರು.

“ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾದ ಸರ್ಕಾರ, ಬಡವರ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಡತನವನ್ನು ಹೆಚ್ಚು ಮಾಡುವ ಕೆಲಸ ನಿರ್ವಹಿಸುತ್ತಿದೆ” ಎಂದು ದೂರಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago