ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ‍್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ.
ಬುಧವಾರ ಬೆಳಿಗ್ಗೆ ತಮ್ಮ 64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಮಾರ್ಗವನ್ನೇ ಬಿಜೆಪಿ ನೇತೃತ್ವದಲ್ಲಿರುವ ಕೇಂದ್ರ ಸರಕಾರ ಅನುಸರಣೆ ಮಾಡುತ್ತಿದೆ. ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ. ಕೇಂದ್ರದ ತಪ್ಪು ನೀತಿಯಿಂದಾಗಿ ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕಾಂಗ್ರೆಸ್ ಕೂಡಾ ಇಂತಹದ್ದೆ ತಪ್ಪುಗಳನ್ನು ಮಾಡಿತ್ತು. ಆ ಹಿನ್ನಲೆಯಲ್ಲಿ ಕಾಂಗ್ರೆಸ್ಸನ್ನು ಜನರು ತಿರಸ್ಕಾರ ಮಾಡಿದ್ದರು” ಎಂದು ಹೇಳಿದ್ದಾರೆ.
“ಗಂಭೀರ ಸಮಸ್ಯೆಗಳಾದ ನಿರುದ್ಯೋಗ, ಹಣದುಬ್ಬರ ಮೊದಲಾದವುಗಳನ್ನು ದೇಶ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ತನ್ನ ಮೊಂಡುತನ ತೋರಿಸಬಾರದು” ಎಂದು ಹೇಳಿದರು.
“ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾದ ಸರ್ಕಾರ, ಬಡವರ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಡತನವನ್ನು ಹೆಚ್ಚು ಮಾಡುವ ಕೆಲಸ ನಿರ್ವಹಿಸುತ್ತಿದೆ” ಎಂದು ದೂರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…