ಚಿಕ್ಕಬಳ್ಳಾಪುರ : ನೂರಾರು ವರ್ಷಗಳ ಇತಿಹಾಸ ಇದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಕೀರ್ತಿ ಕಾಂಗ್ರೆಸ್ ಬಿಟ್ಟರೆ ಮತ್ತೆ ಬೇರೆ ಯಾವ ಪಕ್ಷಕ್ಕೂ ಇಲ್ಲ. ಕಾಂಗ್ರೆಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಉದ್ಘಾಟನೆಗೆ ತೆರಳುವ ವೇಳೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7 ರ ಹಾಡೋಬಂಡೆ ಸಮೀಪ ಇರುವ ಶಿರಡಿ ಸಾಯಿ ಬಾಬಾ ಆಶ್ರಮಕ್ಕೆ ಆಗಮಿಸಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇಡೀ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆ
ಚಿಕ್ಕಬಳ್ಳಾಪುರ ತಾಲೂಕು ಮಾತ್ರವಲ್ಲ ಇಡೀ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪುಟಿದೇಳುತ್ತದೆ. ಅಧಿಕಾರಕ್ಕೂ ಬರುತ್ತದೆ. ಯಾರು ಈ ಬಗ್ಗೆ ಚಿಂತಿಸಬೇಡಿ. ಕಾರ್ಯಕರ್ತರ ರಕ್ಷಣೆಗೆ ನಾವು ಬದ್ದರಾಗಿದ್ದೇವೆ ಎಂದು ಧೈರ್ಯ ತುಂಬಿದರು.
ಮಸೀದಿಗೆ ಬೇಟಿ: ಗುಡಿಬಂಡೆ ಪಟ್ಟಣಕ್ಕೆ ಭೇಟಿ ಕೊಡುವ ಮೊದಲು ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿರುವ ಮಿಸ್ಕೀನ್ ಷಾ ಶೇಲಾನಿ ದರ್ಗಾಗೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್, ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಅಧ್ಯಕ್ಷ ಇಸ್ಮಾಯಿಲ್, ನಗರಸಭಾ ಸದಸ್ಯರಾದ ಸತೀಶ್, ಅಂಬರೀಶ್, ನರಸಿಂಹಮೂರ್ತಿ, ಅಡ್ಡಗಲ್ ಶ್ರೀಧರ್, ಸಂತೋಷ್ ಸೇರಿದಂತೆ ಮತ್ತಿತರರು ಇದ್ದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…