Featured

ಕಾಂಗ್ರೆಸ್‌ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್‌ -Vishwanews24

ಕಾಂಗ್ರೆಸ್‌ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್‌ -Vishwanews24

ಬೆಂಗಳೂರು: ‘ಸಂಘಟನೆಯ ಜತೆಗೆ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮಾರ್ಚ್‌ 3ರಂದು ಈ ಕಾರ್ಯಕ್ರಮ ಆರಂಭಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮಾರ್ಚ್ 1ರಂದು ದೇವಾಲಯ ಹಾಗೂ ದರ್ಗಾಕ್ಕೆ ಭೇಟಿ ಮಾಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, 3ರಂದು ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಟು ದೇವನಹಳ್ಳಿಯಲ್ಲಿ ಮೊದಲ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂಜೆ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

‘ಪ್ರತಿ ಕ್ಷೇತ್ರದಲ್ಲೂ ಜನರ ಮಧ್ಯೆ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ಸರ್ಕಾರದಿಂದ ಎಲ್ಲ ವರ್ಗದ ಜನರಿಗೆ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಾಗಿದೆ. ವರ್ತಕರು, ರೈತರು, ಕಾರ್ಮಿಕರು ಎಲ್ಲ ವರ್ಗಕ್ಕೂ ಅನ್ಯಾಯವಾಗುತ್ತಿದೆ. ಈ ವಿಚಾರವಾಗಿ ಜನರಲ್ಲಿ ಎಚ್ಚರಿಸಿ, ಅವರ ಧ್ವನಿಯನ್ನು ಕೇಂದ್ರ – ರಾಜ್ಯ ಸರ್ಕಾರಕ್ಕೆ ಮುಟ್ಟಿಸುತ್ತೇವೆ. ಎಲ್ಲ ನಗರಗಳ ಮುಖ್ಯರಸ್ತೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ’ ಎಂದರು.

‘ಅಧಿವೇಶನದಲ್ಲಿ ಭಾಗವಹಿಸಲು ತೊಂದರೆ ಆಗದಂತೆ ಪಕ್ಷದ ಕಾರ್ಯಾಧ್ಯಕ್ಷರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಜಿಲ್ಲಾಧ್ಯಕ್ಷರ ಜತೆ ಸೇರಿ ಅವರು ಕಾರ್ಯಕ್ರಮದ  ಸಿದ್ಥತೆ ನಡೆಸುತ್ತಾರೆ’ ಎಂದರು.

ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24

ಕಾಂಗ್ರೆಸ್‌ಗೆ ಪ್ರಸನ್ನಕುಮಾರ್: ‘ಪುಲಕೇಶಿನಗರದ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್ ಅವರನ್ನು ಪಕ್ಷದ ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದ್ದೇವೆ’ ಎಂದು ಶಿವಕುಮಾರ್‌ ಹೇಳಿದರು.

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago