ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಇದ್ದ : ಕುಮಾರಸ್ವಾಮಿ – Vishwanews24
ಬಿಟ್ ಕಾಯಿನ್ ಹಗರಣ ತನಿಖೆ ನಡೆಸಲು ತಜ್ಞರ ನೆರವು ಪಡೆದುಕೊಳ್ಳಿ: ಸಿಎಂ ಗೆ ಹೆಚ್.ಡಿ.ಕುಮಾರಸ್ವಾಮಿ
ತುಮಕೂರು: “2016ರಲ್ಲೇ ಬಿಟ್ ಕಾಯಿನ್ ಪ್ರಕರಣ ಇತ್ತು. ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಇದ್ದ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ಧಾರೆ.
ಕೊರಟಗೆರೆಯಲ್ಲಿ ಮಾತನಾಡಿದ ಅವರು, “ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಆರಂಭಿಕ ಹಂತದ ಚರ್ಚಯಾಗುತ್ತಿದೆ. ಈ ಬಗ್ಗೆ ಏನಾಗುತ್ತದೆ ಎಂದು ಕಾದು ನೋಡೋಣ” ಎಂದಿದ್ದಾರೆ.
“ಬಿಟ್ ಕಾಯಿನ್ ಪ್ರಕರಣ 2016ರಲ್ಲೇ ಇತ್ತು. ಬಿಟ್ ಕಾಯಿನ್ ಪ್ರಕರಣ ಸಂಬಂಧ ಕಾನೂನು ಹೋರಾಟ ಮಾಡುವುದು ಪ್ರಯೋಜನವಿಲ್ಲ. ಪ್ರಕರಣದ ಕುರಿತು ಆರಂಭಿಕ ಹಂತದ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ ಎಂದು ಹೇಳಿದರು.
ಬಿಟ್ ಕಾಯಿನ್ ಹಗರಣ ಪ್ರಕರಣವನ್ನು ಇಡಿಗೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಏಳೆಂಟು ಬಾರಿ ಹಗರಣದ ಮಾಸ್ಟರ್ ಮೈಂಡ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ್ನು ಬಂಧನಕ್ಕೊಳಪಡಿಸಿ ತನಿಖೆಗೆ ಒಳಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶ್ರಿಕಿ ಬಂಧಿಸಲಾಗಿತ್ತು ಎನ್ನಲಾಗಿದೆ. ಇದರ ಬಗ್ಗೆ ನುರಿತ ತಜ್ಞರಿಂದ ಮಾಹಿತಿ ಪಡೆದು ತನಿಖೆ ಮಾಡಬೇಕು. ಇಷ್ಟು ವರ್ಷ ಅವನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಗೆ ಅಂದರೆ ಹೇಗೆ? ಕಾಂಗ್ರೆಸ್ಗೆ ಈ ಬಗ್ಗೆ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ ಬೇಡ ಅಂದವರು ಯಾರು..? ಎಂದು ಹೇಳಿದರು.
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ , ಬೈಕ್ ಸವಾರ ಸಾವು – VIshwanews24
