Featured

ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಶ್ರೀಕಿ ಇದ್ದ : ಕುಮಾರಸ್ವಾಮಿ – Vishwanews24

ಬಿಟ್ ಕಾಯಿನ್ ಹಗರಣ ತನಿಖೆ ನಡೆಸಲು ತಜ್ಞರ ನೆರವು ಪಡೆದುಕೊಳ್ಳಿ: ಸಿಎಂ ಗೆ ಹೆಚ್.ಡಿ.ಕುಮಾರಸ್ವಾಮಿ

ತುಮಕೂರು: “2016ರಲ್ಲೇ ಬಿಟ್‌ ಕಾಯಿನ್‌ ಪ್ರಕರಣ ಇತ್ತು. ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಶ್ರೀಕಿ ಇದ್ದ” ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ಧಾರೆ.

ಕೊರಟಗೆರೆಯಲ್ಲಿ ಮಾತನಾಡಿದ ಅವರು, “ಬಿಟ್‌ ಕಾಯಿನ್‌ ಪ್ರಕರಣದ ಬಗ್ಗೆ ಆರಂಭಿಕ ಹಂತದ ಚರ್ಚಯಾಗುತ್ತಿದೆ. ಈ ಬಗ್ಗೆ ಏನಾಗುತ್ತದೆ ಎಂದು ಕಾದು ನೋಡೋಣ” ಎಂದಿದ್ದಾರೆ.

“ಬಿಟ್‌ ಕಾಯಿನ್‌ ಪ್ರಕರಣ 2016ರಲ್ಲೇ ಇತ್ತು. ಬಿಟ್‌ ಕಾಯಿನ್‌ ಪ್ರಕರಣ ಸಂಬಂಧ ಕಾನೂನು ಹೋರಾಟ ಮಾಡುವುದು ಪ್ರಯೋಜನವಿಲ್ಲ. ಪ್ರಕರಣದ ಕುರಿತು ಆರಂಭಿಕ ಹಂತದ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ ಎಂದು ಹೇಳಿದರು.

ಬಿಟ್ ಕಾಯಿನ್ ಹಗರಣ ಪ್ರಕರಣವನ್ನು ಇಡಿಗೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ.  ಏಳೆಂಟು ಬಾರಿ ಹಗರಣದ ಮಾಸ್ಟರ್ ಮೈಂಡ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ್ನು ಬಂಧನಕ್ಕೊಳಪಡಿಸಿ ತನಿಖೆಗೆ ಒಳಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶ್ರಿಕಿ‌ ಬಂಧಿಸಲಾಗಿತ್ತು ಎನ್ನಲಾಗಿದೆ. ಇದರ ಬಗ್ಗೆ ನುರಿತ ತಜ್ಞರಿಂದ ಮಾಹಿತಿ ಪಡೆದು ತನಿಖೆ ಮಾಡಬೇಕು. ಇಷ್ಟು ವರ್ಷ ಅವನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಗೆ ಅಂದರೆ ಹೇಗೆ? ಕಾಂಗ್ರೆಸ್​ಗೆ ಈ ಬಗ್ಗೆ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ ಬೇಡ ಅಂದವರು ಯಾರು..? ಎಂದು ಹೇಳಿದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

11 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

11 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

11 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

11 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

14 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

15 hours ago