ಹಾಸನ: ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿಯ ಯಾವ ಚಾಣಕ್ಯ ತಂತ್ರಗಳೂ ನಡೆಯುವುದಿಲ್ಲ. ಅತಂತ್ರ ಪರಿಸ್ಥಿತಿ ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೃಢವಿಶ್ವಾಸ ವ್ಯಕ್ತಪಡಿಸಿದರು.
‘‘ನಮ್ಮದೇ ಸರಕಾರ, ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೋದೆಡೆ ಎಲ್ಲ ಹೇಳುತ್ತಿದ್ದಾರೆ. ಅವರ ಪಕ್ಷ ಅಧಿಕಾರಕ್ಕೆ ಬರುವುದಿರಲಿ, 25 ಸ್ಥಾನಕ್ಕೆ ಇಳಿದರೂ ಆಶ್ಚರ್ಯವಿಲ್ಲ,’’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
‘‘ಜೆಡಿಎಸ್ 25 ಸ್ಥಾನ ಗಳಿಸಲ್ಲ ಎಂದು ಪದೇ ಪದೆ ಕೆಣಕಿ ಅಧೋಗತಿಗೆ ಹೋಗಬೇಡಿ. ಮೇ 18ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ. ಅಂದೇ ಜೆಡಿಎಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ನನ್ನ ತಂದೆ ದೇವೇಗೌಡರು, ತಾಯಿ ಚನ್ನಮ್ಮ ಸಾಕ್ಷಿಯಾಗಲಿದ್ದಾರೆ. ಜನರ ಮನಸ್ಸನ್ನು ಪರಿರ್ತನೆ ಮಾಡಲು ಜೆಡಿಎಸ್ ಟೀಕಿಸುತ್ತಿದ್ದೀರಲ್ಲ, ಇನ್ನೊಂದು ಜನ್ಮ ಎತ್ತಿಬಂದರೂ, ಜನ ನಿಮ್ಮ ಮಾತು ಕೇಳುವುದಿಲ್ಲ ಎಂಬ ನಂಬಿಕೆ ನನಗಿದೆ,’’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘‘ಸೋಲಿನ ಭೀತಿಯಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ದಿನದಿಂದ ಠಿಕಾಣಿ ಹೂಡಿ ಹಳ್ಳಿ, ಹಳ್ಳಿಗೆ ತಿರುಗುತ್ತಿದ್ದೀರಲ್ಲ, ಅಲ್ಲಿ ಜನತೆ ಯಾವ ರೀತಿ ಸ್ಪಂದಿಸುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲವೆ. ನಿಮ್ಮ ದುರಂಕಾರಕ್ಕೆ ತಕ್ಕಶಾಸ್ತಿ ಮಾಡಲಿದ್ದಾರೆ’’ ಎಂದು ಟೀಕಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…