Featured

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ :  ಸಿದ್ದರಾಮಯ್ಯ  – Vishwanews24

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ :  ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ಮಹಿಳಾ ಸಮಾವೇಶ ನಡೆದಿದೆ.ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಹಿಳೆಯರಿಗೆ, ರೈತರಿಗೆ ಸಾಕಷ್ಟು ಭರವಸೆ ನೀಡಿದ್ದಾರೆ.

ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರೈತರಿಗೂ ಕೂಡ ಬಡ್ಡಿರಹಿತ ಸಾಲವನ್ನು 5 ಲಕ್ಷಕ್ಕೆ ಏರಿಸುತ್ತೇವೆ. ಶೇ. 3ರ ಬಡ್ಡಿಯಲ್ಲಿ ರೈತರಿಗೆ ನೀಡುವ ಸಾಲವನ್ನು 10 ಲಕ್ಷದಿಂದ 20 ಲಕ್ಷ ರೂಪಾಯಿಗೆ ಏರಿಸುತ್ತೇವೆ ಎಂದು ಮಹಿಳಾ ಸಮಾವೇಶದಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಇನ್ನು ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಎಂದಿದ್ದಾರೆ. ಸರಿಯಾಗಿ ಸಾಲದ ಕಂತು ಕಟ್ಟುತ್ತಿರುವವರ ಸಾಲವನ್ನು ಮನ್ನಾ ಮಾಡಲಾಗುವುದು .

ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಸಾಲದ ಕಂತು ಕಟ್ಟಿ ಎಂದು ಹೇಳಿದ್ದಾರೆ.ಬಡ್ಡಿರಹಿತ ಸಾಲದ ಪ್ರಮಾಣ ಏರಿಸುವ ಬಗ್ಗೆ ಮತ್ತು ಸಾಲ ಮನ್ನಾ ಬಗ್ಗೆ ಪಕ್ಷದ ಪ್ರಣಾಳಿಕೆ ಕಮಿಟಿ ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು.ಇದೇ ವೇಳೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಹಾಲು, ಮೊಸರು, ಅಕ್ಕಿ ಸೇರಿದಂತೆ ಮಕ್ಕಳು ಓದು ಪೆನ್ನು ಪುಸ್ತಕಗಳ ಮೇಲೂ ತೆರಿಗೆ ವಿಧಿಸಿದೆ ಎಂದ , ಮೋದಿ ಸರ್ಕಾರ ಬಂದ ಮೇಲೆ ಉದ್ಯಮಿಗಳ 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಮಹಿಳಾ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳು ಈ ಕೆಳಗಿನಂತಿವೆ :

* ಮಹಿಳೆಯರಿಗೆ ನೀಡುವ ಬಡ್ಡಿರಹಿತ ಸಾಲ 50 ಸಾವಿರ ರೂ ನಿಂದ 1 ಲಕ್ಷ ರೂಗೆ ಏರಿಕೆ
* ರೈತರಿಗೆ ಬಡ್ಡಿರಹಿತವಾಗಿ ನೀಡುವ 3 ಲಕ್ಷ ರೂ ಸಾಲದ ಮೊತ್ತ 10 ಲಕ್ಷಕ್ಕೆ ಏರಿಕೆ
* ಶೇ. 3ರಷ್ಟು ಬಡ್ಡಿ ಮೇಲೆ ನೀಡುವ ಸಾಲ 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ
* ಕೋಲಾರದಲ್ಲಿ ಎಪಿಎಂಸಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುತ್ತೇವೆ
* ಟೊಮ್ಯಾಟೊ ಮತ್ತು ಮಾವು ಸಂಸ್ಕರಣಾ ಘಟಕ ಮಾಡಿಕೊಡುತ್ತೇವೆ
* ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ
* ಹಾಲಿಗೆ ಪ್ರೋತ್ಸಾಹ ಧನವನ್ನು 6 ರೂಪಾಯಿಗೆ ಹೆಚ್ಚಿಸುತ್ತೇವೆ

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

6 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

12 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

12 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

13 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

15 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

15 hours ago