ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.
ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಬೆಳಗಾವಿಯ ಈ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದ ನಲುಗಿ ಹೋಗಿದೆ. ಕರ್ನಾಟಕ ಜನತೆಯ ಕಷ್ಟ ಕಾರ್ಪಣ್ಯಗಳು ತೊಲಗಲಿ ಎಂದು ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದ ಅವರು, ವೇದಿಕೆಯ ಮೇಲೆಯೇ ಉಚಿತ ವಿದ್ಯುತ್ ಭಿತ್ತಿಚಿತ್ರಗಳನ್ನು ಕಾಂಗ್ರೆಸ್ ನಾಯಕರು ಪ್ರದರ್ಶನ ಮಾಡಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…