ಕಾಂಗ್ರೆಸ್ ಅಭಿವೃದ್ಧಿ ಕೆಲಸದಲ್ಲಿ ಸೋತಿದೆ , ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದೆ : ಪ್ರಮೋದ್ ಮಧ್ವರಾಜ್ – vishwanews24

Featured, ಉಡುಪಿ

ಕೊಲೆಗಾರರು ಹೇಗಾದರೂ ಬಚಾವ್ ಆಗುತ್ತೇವೆ ಎಂಬ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ ..

ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಧೈರ್ಯವನ್ನು ತುಂಬಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ..

ಉಡುಪಿ: ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಸೋತಿದೆ. ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಧೈರ್ಯವನ್ನು ತುಂಬಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂಬ ಭಾವನೆ ರಾಜ್ಯದ ಜನರ ಮನಸ್ಸಿನಲ್ಲಿ ಮೂಡುತ್ತಿದೆ.

ಸಾರಿಗೆ ನಿಗಮಗಳಿಗೆ 1,100 ಕೋಟಿ ರೂ. ಬಾಕಿ ; ಬಸ್ ಪ್ರಯಾಣ ದರ ಏರಿಸುವ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ – vishwanews24

ರಾಜ್ಯದಲ್ಲಿ ಇತ್ತೀಚೆಗೆ ಹಲವು ಕೊಲೆಗಳು ನಡೆದಿದ್ದು ಕೊಲೆಗಾರರು ಹೇಗಾದರೂ ಬಚಾವ್ ಆಗುತ್ತೇವೆ ಎಂಬ ವಾತಾವರಣ ನಿರ್ಮಾಣವಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಇವೆಲ್ಲಕ್ಕೆ ಕಡಿವಾಣ ಹಾಕುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಗ್ರಹಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್ : ದರ್ಶನ್ ಗ್ಯಾಂಗ್​ನ ಪೊಲೀಸ್‌ ಕಸ್ಟಡಿ ಅವಧಿ ಇಂದು ಮುಕ್ತಾಯ – ನ್ಯಾಯಾಲಯಕ್ಕೆ ಹಾಜರುಪಡಿಸಲಿರೋ ಪೊಲೀಸರು – vishwanews24

Leave a Reply