ಉಡುಪಿ: ಗ್ರಾಮ ಪಂಚಾಯತ್ನಿಂದ ಪಾರ್ಲಿಮೆಂಟ್ ವರೆಗೂ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಪಕ್ಷದ ತತ್ತ್ವ, ಸಿದ್ಧಾಂತಗಳಿಗೆ ನಿಷ್ಠರಾಗಿದ್ದಲ್ಲಿ ತಾವು ಜಯಗಳಿಸುವುದರ ಜೊತೆಗೆ ಕಾರ್ಯಕರ್ತರ ಶ್ರಮಕ್ಕೂ ಬೆಲೆ ದೊರೆತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನ ಸೇವೆಗೆ ಅವಕಾಶ ದೊರೆಯುತ್ತದೆ. ಎಂದು ಕೆ.ಪಿ.ಸಿ.ಸಿ. ಕೋ-ಆರ್ಡಿನೇಟರ್ ಹರೀಶ್ ಕಿಣಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಅವರು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡು ಅಲೆವೂರು 4ನೇ ವಾರ್ಡ್ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿ ವಿಜಯಗಳಿಸಿದ ರೂಪೇಶ್ ದೇವಾಡಿಗ ಮತ್ತು ಶ್ರೀಲತಾ ಇವರಿಗೆ ಅಭಿನಂದನಾ ಸಮಾರಂಭ ಮತ್ತು ಮತದಾರರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶ್ರೀಧರ ದೇವಾಡಿಗ, ಹಿಂದು ಕಾಂಗ್ರೆಸ್ ಮುಖಂಡರಾದ ಗೋಪಾಲ ಸೇರಿಗಾರ್, ಉದ್ಯಮಿ ಹರೀಶ್ ಕುಲಾಲ್ ಉಪಸ್ಥಿತರಿದ್ದರು. ಅಲೆವೂರು ಗ್ರಾಮೀಣ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಅಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿ ಸದಸ್ಯರಾಗಿ ಆಯ್ಕೆಯಾದವರನ್ನು ಹಾಗೂ ಸ್ಪರ್ಧಿಸಿದ ಇತರ ಅಭ್ಯರ್ಥಿಗಳನ್ನು ಗೌರವಿಸಲಾಯಿತು.
ಕಾಂಗ್ರೆಸ್ ಯುವ ಮುಖಂಡ ಅಶೋಕ್ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲಿತಾ ಸೇರಿಗಾರ್ ಸ್ವಾಗತಿಸಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಸೇರಿಗಾರ್ ಧನ್ಯವಾದವಿತ್ತರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…