ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ – Vishwanews24
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೀದರ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ : ಪ್ರಮೋದ್ ಸಾವಂತ್ – Vishwanews24
