ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಪಡುಬಿದ್ರಿ 100ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು,ಸಮಾಜಸೇವಕರು ಬಿಜೆಪಿ ಸೇರ್ಪಡೆ.
ಕಾಪು : ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೆಯುತ್ತಿದೆ. ಕಾಪು ವಿಧಾನ ಸಭಾ ಕ್ಷೇತ್ರದ ಪಡುಬಿದ್ರಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ಮುಮ್ತಾಜ್ , ಸಮಾಜ ಸೇವಕ ಉಮಾನಾಥ್ ಕೋಟ್ಯಾನ್, ವಿಠ್ಠಲ್ ಮಾಸ್ಟರ್ ಸೇರಿದಂತೆ ನೂರಕ್ಕೂ ಅಧಿಕ ಮಂದಿ ಇಂದು ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದಬೆಟ್ಟು ನೇತೃತ್ವದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಗೊಂಡರು.
ಸೇರ್ಪಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ, ಶಶಿದರ್ ಶೆಟ್ಟಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡು ಉಪಸ್ಥಿತರಿದ್ದರು.


