ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ – vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ

ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ. ಈ ಕುರಿತು ಚರ್ಚಿಸಲು ಪಕ್ಷದ ಆಡಳಿತವಿರುವ 4 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ದೆಹಲಿಯಲ್ಲಿ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ರದ್ದಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ತಾಲೂಕಿನ ದೊಡ್ಡಗೊಲ್ಲಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್‌ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇನ್ಮುಂದೆ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ – vishwanews24

ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು. ವಿಶ್ವದ 80ಕ್ಕೂ ಹೆಚ್ಚು ಪ್ರಸಿದ್ಧ ವಿವಿಗಳು ಕರ್ನಾಟಕದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತಿ ತೋರುತ್ತಿವೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ಅದು ಬೆಂಗಳೂರು ಮತ್ತು ಕರ್ನಾಟಕದ ಮೂಲಕವೇ ಸಾಧ್ಯ ಎಂದು ಹೇಳಿದ್ದೆ ಎಂದು ಹೇಳಿದರು.

Leave a Reply