ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ. ಈ ಕುರಿತು ಚರ್ಚಿಸಲು ಪಕ್ಷದ ಆಡಳಿತವಿರುವ 4 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ದೆಹಲಿಯಲ್ಲಿ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ರದ್ದಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ತಾಲೂಕಿನ ದೊಡ್ಡಗೊಲ್ಲಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್‌ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು. ವಿಶ್ವದ 80ಕ್ಕೂ ಹೆಚ್ಚು ಪ್ರಸಿದ್ಧ ವಿವಿಗಳು ಕರ್ನಾಟಕದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತಿ ತೋರುತ್ತಿವೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ಅದು ಬೆಂಗಳೂರು ಮತ್ತು ಕರ್ನಾಟಕದ ಮೂಲಕವೇ ಸಾಧ್ಯ ಎಂದು ಹೇಳಿದ್ದೆ ಎಂದು ಹೇಳಿದರು.
ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಿಢೀರ್ ದಾಳಿ: 9 ಕೈದಿಗಳಿಂದ 10 ಮೊಬೈಲ್ ವಶ ಮಂಗಳೂರು: ಮಂಗಳೂರಿನ ಜಿಲ್ಲಾ…
ಉಡುಪಿ: ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ಉಡುಪಿ: ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ…
ಮಲ್ಪೆ: ರಸ್ತೆ ಬದಿ ಪತ್ತೆಯಾಗಿದ್ದ ನವಜಾತ ಶಿಶು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ…
ಉಡುಪಿ: ಆಸ್ಟ್ರೋ ಮೋಹನ್‌ಗೆ ಅಮೆರಿಕದ ಪ್ರತಿಷ್ಠಿತ ‘ಇಪಿಎಸ್‌ಎ’ ಗೌರವ ಮೂರು ದಶಕಗಳ ಛಾಯಾಪತ್ರಿಕೋದ್ಯಮ, ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರದರ್ಶನಗಳಲ್ಲಿನ ನಿರಂತರ ಸಾಧನೆಗೆ…
ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ…
ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಘಾತ ; ವ್ಯಕ್ತಿ ಸಾವು ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ…