Featured

ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ : ಪ್ರಮೋದ್ ಮಧ್ವರಾಜ್ -Vishwanews24

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಬಿ ಫಾರ್ಮ್ ಪಡೆದಿದ್ದು, ಕಾಂಗ್ರೆಸ್ ಕೈ ಮತ್ತು ಜೆಡಿಎಸ್ ನ ತೆನೆ ಹೊತ್ತ ಮಹಿಳೆಯ ಚಿಹ್ನೆ ಇರುವ ಶಾಲು ಹೊದ್ದು ಕಾಣಿಸಿಕೊಂಡಿದ್ದಾರೆ.

ಇಂದು ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಪ್ರಮೋದ್ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾನು ಕಾಂಗ್ರೆಸ್ -ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿದ್ದು, ಎರಡು ಪಕ್ಷದ ಚಿಹ್ನೆಯನ್ನು ಒಂದೇ ಶಾಲಿನಲ್ಲಿ ಮುದ್ರಿಸಿಕೊಂಡಿದ್ದೇನೆ. ಇಂತಹ ಶಾಲು ಈ ವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು ಎಪ್ರೀಲ್ 18 ರವರೆಗೆ ತೊಡುತ್ತೇನೆ. ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ ಎಂದು ಹೇಳಿದರು.

ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ. ರಾಜ್ಯದಲ್ಲಿ ಹೇಗಿದ್ಯೋ ಗೊತ್ತಿಲ್ಲ. ಉಡುಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮೈತ್ರಿ ಧರ್ಮದಂತೆ ಉಡುಪಿ-ಚಿಕ್ಕಮಗಳೂರು ಜೆಡಿಎಸ್ ಪಾಲಾಯ್ತು. ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸ್ತೇನೆ. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಈ ಅವಕಾಶ ಸಿಕ್ಕಿದೆ ಎಂದರು.

ಉಭಯ ಜಿಲ್ಲೆಗಳ ಜನತೆ ಕೆಲಸ ಮಾಡುವ ಸಂಸದರನ್ನು ಆಯ್ಕೆ ಮಾಡಬೇಕು. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಇಂತಹ ಒಂದು ಅವಕಾಶ ನನಗೆ ಸಿಕ್ಕಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದು ಒಂದು ವೇಳೆ ಗೆದ್ದು ಬಂದರೆ ರಾಜ ಧರ್ಮಪಾಲಿಸುತ್ತೇನೆ ಎಂದರು.

ಮಾರ್ಚ್ 25ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ಎರಡು ದಿನದಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದು ಮಧ್ವರಾಜ್ ಹೇಳಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago