ಕಾರ್ಕಳ : ಜನ ಮೆಚ್ಚಿದ ನಾಯಕ, ಯುವಕರ ಕಣ್ಮಣಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಾ. 2ರಂದು ಸಂಜೆ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಸಾವಿರ ಸೀಮೆಯ ಒಡತಿ ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿಗಳು ಬಳಿಕ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ. ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ ಗಳ, 34 ಗ್ರಾಮೀಣ ಕಾಂಗ್ರೆಸ್ ಗಳ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ ವೇದಿಕೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಕುಟುಂಬ ಒಂದಾಗಿ ಸಂಭ್ರಮಿಸಲಿದೆ.
ಸಹಸ್ರ ಸಂಖ್ಯೆಯ ಜನರು ಸಂಭ್ರಮದಲ್ಲಿ ಭಾಗಿ :
ಈಗಾಗಲೇ ಉಚಿತ ಗ್ಯಾರಂಟಿ ಯೋಜನೆಯ ಮೂಲಕ ಜನಮನಗೆದ್ದ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಜನ ಕೊಂಡಾಡುತ್ತಿದ್ದು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ, ಉಚಿತ ಕರೆಂಟ್ ಮೊದಲಾದ ಜನಪದ ಯೋಜನೆಗಳು ಮಹಿಳೆಯರ ಮನ ಗೆದ್ದಿದೆ. ಆದ್ದರಿಂದ ಬೃಹತ್ ಸಂಖ್ಯೆಯ ಮಹಿಳೆಯರು ಸೇರಿದಂತೆ ಸಹಸ್ರ ಸಂಖ್ಯೆಯ ಜನ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ನ ಹಿರಿಯ ನಾಯಕರಾದ ಡಾ. ವೀರಪ್ಪ ಮೊಯ್ಲಿ ಅವರು ಶಾಸಕತ್ವವನ್ನು ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಅಲ್ಲದೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ.
ಈಗಾಗಲೇ ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುತ್ತಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…