Featured

ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಮಾತ್ರವಲ್ಲ, ಇದೊಂದು ಕ್ರಾಂತಿಕಾರಿ ಮತ್ತು ಹೋರಾಟಗಾರ ಪಕ್ಷ : ಈಶ್ವರ ಖಂಡ್ರೆ -Vishwanews24

ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಮಾತ್ರವಲ್ಲ, ಇದೊಂದು ಕ್ರಾಂತಿಕಾರಿ ಮತ್ತು ಹೋರಾಟಗಾರ ಪಕ್ಷ : ಈಶ್ವರ ಖಂಡ್ರೆ -Vishwanews24

ಪಕ್ಷವನ್ನು ಪುನರುಜ್ಜೀವನಗೊಳಿಸಲು ಮುಂದಾಗಿರುವ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಆರ್ ಎಸ್ ಎಸ್ ಮಾದರಿಯಲ್ಲಿ ತರಬೇತಿ ನೀಡಲು ನಿರ್ಧಾರ..

ಬೆಂಗಳೂರು: ಪಕ್ಷವನ್ನು ಪುನರುಜ್ಜೀವನಗೊಳಿಸಲು ಮುಂದಾಗಿರುವ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ವಸತಿ ಶಿಬಿರದ ಮೂಲಕ ತರಬೇತಿ ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾದರಿಯಲ್ಲಿ ತರಬೇತಿ ನೀಡಲು ಕಾಂಗ್ರೆಸ್ ಪಕ್ಷ ನೀಡಲು ಸಜ್ಜಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಮೇಲೆ ಪಕ್ಷವನ್ನು ತಳ ಮಟ್ಟದಿಂದ ಬೂತ್ ಮಟ್ಟದಲ್ಲಿ ಸಂಘಟಿಸಲು ನಿರ್ಧರಿಸಿದ್ದಾರೆ.

ಪಕ್ಷವನ್ನು ಸಂಘಟಿಸಲು ಕಾಂಗ್ರೆಸ್ ಸೇವಾ ದಳ ತಂಡ ರಚಿಸಿದ್ದು, ವಾರದಲ್ಲಿ ಮೂರು ದಿನ ತಾಲೂಕು ಮಟ್ಟದಲ್ಲಿ ಕಾರ್ಯಕರ್ತರಿಗೆ ತರಬೇತಿ ಶಿಬಿರ ನಡೆಸಲು ಯೋಜಿಸಿದೆ, ಈ ಶಿಬಿರದಲ್ಲಿ ಸಂವಿಧಾನ ಮತ್ತು ಸಿದ್ಧಾಂತಗಳ ಮೇಲೆ ಗಮನ ಕೇಂದ್ರೀಕರಿಸಲಾಗುತ್ತಿದೆ

ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಮಾತ್ರವಲ್ಲ, ಇದೊಂದು ಕ್ರಾಂತಿಕಾರಿ ಮತ್ತು ಹೋರಾಟಗಾರ ಪಕ್ಷ, ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ, ಮೌಲ್ಯ, ಸಿದ್ಧಾಂತಗಳ ಜೊತೆಗೆ ಬ್ರಿಟಿಷರ ಜೊತೆ ಹೋರಾಟ ನಡೆಸಿದ ಪಕ್ಷವಾಗಿದೆ. ಸಮಾಜದ ಒಂದು ವರ್ಗವಾಗಿದೆ. ಕೆಲವು ರಾಜಕೀಯ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಇಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮಹಾತ್ಮ ಗಾಂಧಿ ಮತ್ತು ಜವಹರ್ ಲಾಲ್ ನೆಹರು ವಿರುದ್ದ ಸುಳ್ಳು ಸುದ್ದಿಗಳನ್ನು ಹರಿ ಬಿಡಲಾಗುತ್ತಿದೆ,. ನಾವು ಸತ್ಯವನ್ನು ಯುವಕರಿಗೆ ತಿಳಿಸಬೇಕಾಗಿದೆ. ಜೊತೆಗೆ ಯಾವುದು ಸರಿ ಯಾವುದು ತಪ್ಪು ಎಂಬುದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಈ ನಿಟ್ಟಿನಲ್ಲಿ ಅವರಿಗೆ ತರಬೇತಿ ನೀಡಬೇಕಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ಹಾಸ್ಟೆಲ್, ಸಮುದಾಯ ಭವನ ಮತ್ತಿತರ ಸ್ಥಳಗಳಲ್ಲಿ ನಮ್ಮ ತರಬೇತಿ ಶಿಬಿರ ಆಯೋಜಿಸಲಿದ್ದೇವೆ, ಒಂದು ಬಾರಿಗೆ ಸುಮಾರು 100-150 ಜನರನ್ನು ಸೇರಿಸಿ ತರಬೇತಿ ನೀಡಲು ಸಾಧ್ಯವಾಗುವಂತ ಸ್ಥಳಗಳಲ್ಲಿ ಆಯೋಜನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಂತರಿಕ ಸಂಪನ್ಮೂಲ ತಂಡವು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಆಸಕ್ತ ಯುವಕರಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಲಿದೆ ಎಂದು ಹೇಳಿದರು. ಪ್ರತಿ ವರ್ಷ ಆರ್ ಎಸ್ ಎಸ್ ಸಂಘಟನೆ ಕೆಲವು ಆಯ್ದ ಸದಸ್ಯರಿಗೆ ವಿಶೇಷವಾಗಿ ಯುವಕರಿಗೆ ಹಲವು ವಿಷಯಗಳ ಬಗ್ಗೆ ತರಬೇತಿ ನೀಡುತ್ತಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

13 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

14 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

14 hours ago