ಉಡುಪಿ

ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆ‌ಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath

ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆ‌ಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath

ಉಡುಪಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತನ್ನ ನಿಗೂಢ ನಡೆಯಿಂದ ಭಾರೀ ಕುತೂಹಲ ಕೆರಳಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕೊನೆಗೂ ಅಖಾಡ ಕ್ಕೆ ಇಳಿದಿದ್ದಾರೆ
ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಹಾಲಾಡಿ ಅವರು ತನ್ನ ಮನೆಯಲ್ಲಿ ಅತ್ಯಾಪ್ತರ ಸಭೆಯನ್ನು ನಡೆಸಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ರಾತ್ರಿ ಹಾಲಾಡಿ ಅವರ ಸ್ವ ನಿವಾಸದಲ್ಲಿ ಈ ರಹಸ್ಯ ಸಭೆ ನಡೆದಿದೆ ಎನ್ನಲಾಗಿದ್ದು ಸಭೆಯಲ್ಲಿ 37ಕ್ಕೂ ಅಧಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಆಪ್ತರು ಭಾಗವಹಿಸಿದ್ದರು ಎನ್ನಲಾಗಿದೆ.

ಕೋಟ ಹೋಬಳಿ, ಕೋಡಿ ಹೊಸಬೆಂಗ್ರೆ, ಸಾಹೇಬರಕಟ್ಟೆ, ಮಧುವನ ಮತ್ತು ಕುಂದಾಪುರ ನಗರ ಭಾಗದಲ್ಲಿ ಬಿಜೆಪಿ ಇನ್ನಷ್ಟು ಸಕ್ರಿಯವಾಗಿ ಕೆಲಸ ನಿರ್ವಹಿಸುವಂತೆ ಹಾಲಾಡಿ ಸೂಚಿಸಿದ್ದಾರೆ. ಈ ಸಭೆಯ ಬಳಿಕ ಕುಂದಾಪುರದಲ್ಲಿ ಬಿಜೆಪಿಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಹಾಲಾಡಿ ಅವರು ಬಿಟ್ಟು ಕೊಟ್ಟ ಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದ ಕಿರಣ್ ಕೋಡ್ಗಿ ಅವರು ಕಳೆದ ಬಾರಿ ಕುಂದಾಪುರದಲ್ಲಿ 45 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.

ಈಗ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಲೋಕಸಭಾ ಅಭ್ಯರ್ಥಿಯ ಮೇಲಿರುವ ಅಸಮಾಧಾನದ ಕಾರಣಕ್ಕೆ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಲ್ಲಿ ಹೆಚ್ಚಿನವರು ಹಾಲಾಡಿ ಆಪ್ತರು ಎನ್ನಲಾಗಿದೆ. ಇದೇ ಕಾರಣದಿಂದ ಬಿಜೆಪಿ ಪಕ್ಷದ ಮತಗಳು ವಿಭಜನೆಯಾದರೆ ಮುಂದೆ ಕುಂದಾಪುರದಲ್ಲಿ ಕಾಂಗ್ರೆಸ್ ಬಲಿಷ್ಠಗೊಂಡು ಜಯಪ್ರಕಾಶ್ ಹೆಗ್ಡೆ ಅದರ ನಾಯಕತ್ವ ವಹಿಸಿಕೊಳ್ಳುವ ಅಪಾಯ ಇದೆ ಎಂದು ಹಾಲಾಡಿ ಮುಂಜಾಗ್ರತೆ ವಹಿಸಿಕೊಂಡಿರುವ ಸಾಧ್ಯತೆ ಇದೆ.

ಜಯಪ್ರಕಾಶ್ ಹೆಗಡೆ ಮತ್ತು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇಬ್ಬರು ಕೂಡ ಹಲವಾರು ವರ್ಷಗಳಿಂದ ಕುಂದಾಪುರದಲ್ಲಿ ಪಾರಂಪರಿಕ ಎದುರಾಳಿಗಳಾಗಿ ಗುರುತಿಸಿಕೊಂಡಿದ್ದಾರೆ.
ಹಾಲಾಡಿ ಅವರ ಈ ಕೊನೆಯ ಕ್ಷಣದ ನಡೆ ಕುಂದಾಪುರದ ಇಡೀ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದೆ. ಕುಂದಾಪುರದಲ್ಲಿ ಆದರೂ ಲೀಡ್ ಬರಬಹುದು ಎಂದು ಭಾವಿಸಿದ್ದ ಕಾಂಗ್ರೆಸ್ಸಿಗೆ ಹಾಲಾಡಿಯವರ ಈ ಪ್ರಹಾರ ಮರ್ಮಾಘಾತ ಮಾಡಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago