Featured

ಬಿಜೆಪಿ ಗೆಲ್ಲುತ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ ; ಕಾಂಗ್ರೆಸ್ ಗೆ ದುರಹಂಕಾರ ಬಿಡಿ ಎಂದರೂ ಅರ್ಥವಾಗಲಿಲ್ಲ : ಜನಾರ್ದನ ಪೂಜಾರಿ -Vishwanews24

ಮಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರದಲ್ಲಿ , ಕಾಂಗ್ರೆಸ್ 2 ಕ್ಷೇತ್ರದಲ್ಲಿ ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಿಗೆ ಸಿಕ್ಕ ಭರ್ಜರಿ ಮುನ್ನಡೆಯಿಂದ ಬಿಜೆಪಿ ನೇತೃತ್ವದ ಸರ್ಕಾರದ ಭವಿಷ್ಯ ಭದ್ರವಾಗಿದೆ.

ಉಪಸಮರದ ಫಲಿತಾಂಶದ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ, ಬಿಜೆಪಿ ಗೆಲ್ಲುತ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ ಎಂದು ಕಾಂಗ್ರೆಸ್ ಪಕ್ಷದ ಇಂದಿನ ಪರಿಸ್ಥಿತಿ ಕಂಡು ಕಣ್ಣೀರಿಟ್ಟರು.

ಅವರು ಡಿ.09 ರ ಸೋಮವಾರ ಜೆಪ್ಪು ಪ್ರಶಾಂತ ನಿವಾಸ ಆಶ್ರಮದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಯವರ ಹುಟ್ಟು ಹಬ್ಬದ ಕಾರ್ಯಕ್ರಮ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

” ಕಾಂಗ್ರೆಸ್ ಭವಿಷ್ಯದ ಬಗ್ಗೆ ನಾನು ನನ್ನ ಪಕ್ಷದವರಿಗೆ ಮೊದಲೇ ಹೇಳಿದ್ದೆ, ಅರ್ಥಮಾಡಿಕೊಳ್ಳಿ, ನೀವು ಹೀಗೆ ದುರಹಂಕಾರ ಮಾಡಿಕೊಂಡು ಹೋದರೆ ಬಿಜೆಪಿಯನು ತಡೆಯಲು ಸಾಧ್ಯವಿಲ್ಲ. ನನ್ನ ಪಕ್ಷದವರಲ್ಲಿ ಕೈ ಮುಗಿದು, ಕಣ್ಣೀರು ಸುರಿಸಿ ಹೇಳಿದೆ ಆದರೆ ನಮ್ಮ ಪಾರ್ಟಿಯವರಿಗೆ ಇದ್ಯಾವುದು ಅರ್ಥ ಆಗಲಿಲ್ಲ..ಇಂದು ಫಲಿತಾಂಶದ ಹಿರಬಿದ್ದಿದೆ, ಈ ಬಳಿಕವಾದರೂ ಅರ್ಥ ಆಯಿತಾ ಎಂದು ನಮ್ಮ ಪಕ್ಷದವರನ್ನು ಕೇಳುತ್ತಿದ್ದೇನೆ. ನಾನು ಈ ಭವಿಷ್ಯವನ್ನು ಕೆಲವು ತಿಂಗಳ ಹಿಂದೆ ಹೇಳಿದ್ದೆ, ದುರಹಂಕಾರ ಮಾಡಬೇಡಿ ಸರಿಪಡಿಸಿಕೊಂಡು ಹೋಗಿ, ಇಲ್ಲವಾದ್ರೆ ಬಿಜೆಪಿ ಬರುತ್ತದೆ ಕಾಂಗ್ರೆಸ್ ಸಾಯುತ್ತದೆ ” ಎಂದು ಹೇಳಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago