ಮಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರದಲ್ಲಿ , ಕಾಂಗ್ರೆಸ್ 2 ಕ್ಷೇತ್ರದಲ್ಲಿ ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಿಗೆ ಸಿಕ್ಕ ಭರ್ಜರಿ ಮುನ್ನಡೆಯಿಂದ ಬಿಜೆಪಿ ನೇತೃತ್ವದ ಸರ್ಕಾರದ ಭವಿಷ್ಯ ಭದ್ರವಾಗಿದೆ.
ಉಪಸಮರದ ಫಲಿತಾಂಶದ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ, ಬಿಜೆಪಿ ಗೆಲ್ಲುತ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ ಎಂದು ಕಾಂಗ್ರೆಸ್ ಪಕ್ಷದ ಇಂದಿನ ಪರಿಸ್ಥಿತಿ ಕಂಡು ಕಣ್ಣೀರಿಟ್ಟರು.
ಅವರು ಡಿ.09 ರ ಸೋಮವಾರ ಜೆಪ್ಪು ಪ್ರಶಾಂತ ನಿವಾಸ ಆಶ್ರಮದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಯವರ ಹುಟ್ಟು ಹಬ್ಬದ ಕಾರ್ಯಕ್ರಮ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
” ಕಾಂಗ್ರೆಸ್ ಭವಿಷ್ಯದ ಬಗ್ಗೆ ನಾನು ನನ್ನ ಪಕ್ಷದವರಿಗೆ ಮೊದಲೇ ಹೇಳಿದ್ದೆ, ಅರ್ಥಮಾಡಿಕೊಳ್ಳಿ, ನೀವು ಹೀಗೆ ದುರಹಂಕಾರ ಮಾಡಿಕೊಂಡು ಹೋದರೆ ಬಿಜೆಪಿಯನು ತಡೆಯಲು ಸಾಧ್ಯವಿಲ್ಲ. ನನ್ನ ಪಕ್ಷದವರಲ್ಲಿ ಕೈ ಮುಗಿದು, ಕಣ್ಣೀರು ಸುರಿಸಿ ಹೇಳಿದೆ ಆದರೆ ನಮ್ಮ ಪಾರ್ಟಿಯವರಿಗೆ ಇದ್ಯಾವುದು ಅರ್ಥ ಆಗಲಿಲ್ಲ..ಇಂದು ಫಲಿತಾಂಶದ ಹಿರಬಿದ್ದಿದೆ, ಈ ಬಳಿಕವಾದರೂ ಅರ್ಥ ಆಯಿತಾ ಎಂದು ನಮ್ಮ ಪಕ್ಷದವರನ್ನು ಕೇಳುತ್ತಿದ್ದೇನೆ. ನಾನು ಈ ಭವಿಷ್ಯವನ್ನು ಕೆಲವು ತಿಂಗಳ ಹಿಂದೆ ಹೇಳಿದ್ದೆ, ದುರಹಂಕಾರ ಮಾಡಬೇಡಿ ಸರಿಪಡಿಸಿಕೊಂಡು ಹೋಗಿ, ಇಲ್ಲವಾದ್ರೆ ಬಿಜೆಪಿ ಬರುತ್ತದೆ ಕಾಂಗ್ರೆಸ್ ಸಾಯುತ್ತದೆ ” ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…