Featured

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ  – Vishwanews24

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ

ಮಂಗಳೂರು: ಕುತೂಹಲ ಮೂಡಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗ್ಲೆ ಆಶಾ ತಿಮ್ಮಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ಇನ್ನೂ ನಿರ್ಧಾರವಾಗಿಲ್ಲ.ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳಿದ್ದರೂ ನಾಲ್ಕೈದು ಮಂದಿಯ ಹೆಸರು ಮುಂಚೂಣಿಯಲ್ಲಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಕೂಡ ಒಬ್ಬರಾಗಿದ್ದರು. ಅವರೀಗ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಬೆಂಗಳೂರು ಜೆಪಿ ನಗರದಲ್ಲಿ ಸಮಾರಂಭ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಹಲವು ನಾಯಕರ ಜೊತೆ ದಿವ್ಯ ಪ್ರಭಾ ಗೌಡ ಅವರು ಜೆಡಿಎಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ದಿವ್ಯ ಪ್ರಭಾ ಗೌಡ ಅವರು ಮೂರು ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿಯೂ ಟಿಕೆಟ್ ಬಯಸಿದ್ದರೂ ಅವರಿಗೆ ಟಿಕೆಟ್ ಸಿಗದೇ ಇರುವ ಹಿನ್ನೆಲೆಯಲ್ಲಿ ಮತ್ತು ಅವರ ಅಭಿಮಾನಿಗಳ ಒತ್ತಾಯದ ಮೇರೆಗೆ ಜೆಡಿಎಸ್ ಸರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ. ದಿವ್ಯ ಪ್ರಭಾ ಅವರು ಜೆಡಿಎಸ್ ಸೇರ್ಪಡೆಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

8 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago