ರಾಜ್ಯ ನ್ಯೂಸ್

ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ, ಸತ್ತ ಮೇಲೆ ನನ್ನ ಅಂತ್ಯ ಸಂಸ್ಕಾರಕ್ಕಾದರೂ ಬನ್ನಿ : ತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜನ ಖರ್ಗೆ ಭಾವುಕ ಮಾತು – Vishwanews24

ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ,  ನಾನು ಸತ್ತ ಮೇಲೆ ನನ್ನ ಅಂತ್ಯ ಸಂಸ್ಕಾರಕ್ಕಾದರೂ ಬನ್ನಿ : ತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜನ ಖರ್ಗೆ ಭಾವುಕ ಮಾತು

ಕಲಬುರ್ಗಿ: ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಬುಧವಾರ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಜಿಲ್ಲೆಯ ಅಫಜಲಪುರದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಿಮ್ಮ ಮತವನ್ನು ತಪ್ಪಿಸಿಕೊಂಡರೆ (ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕದಿದ್ದರೆ) ನನಗೆ ಇಲ್ಲಿ ಸ್ಥಾನವಿಲ್ಲ ಎಂದು ಭಾವಿಸುತ್ತೇನೆ ಮತ್ತು ನಿಮ್ಮ ಹೃದಯವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ ಎಂದು ಖರ್ಗೆ ಹೇಳಿದ್ದಾರೆ. ಅವರು ಇಲ್ಲಿ 2009 ಮತ್ತು 2014 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು 2019 ರಲ್ಲಿ ಸೋತಿದ್ದರು.

ಕಾಂಗ್ರೆಸ್ಸಿಗೆ ಮತ ಹಾಕುತ್ತೀರೋ ಇಲ್ಲವೋ, ಕಲಬುರಗಿಗಾಗಿ ಕೆಲಸ ಮಾಡಿದ್ದೇನೆ ಎಂದು ಭಾವಿಸಿದರೆ, ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಸತ್ತಾಗ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ, ಹೂಳಿದ್ರೆ ಒಂದು ಹಿಡಿ ಮಣ್ಣು ಹಾಕಲು ಬನ್ನಿ. ಆಗ ಜನರು ನೋಡಪ್ಪ ಆತನ ಅಂತ್ಯಕ್ರಿಯೆಗೆ ಎಷ್ಟು ಜನ ಬಂದರೂ ಅಂತ ಹೇಳಬೇಕು ಎಂದು ಭಾವುಕರಾದ್ದಾರೆ

ʻಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತವನ್ನು ಸೋಲಿಸಲು ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ನಾನು ರಾಜಕೀಯಕ್ಕಾಗಿ ಹುಟ್ಟಿದ್ದೇನೆ. ಚುನಾವಣೆಗೆ ಸ್ಪರ್ಧಿಸಲಿ ಅಥವಾ ಇಲ್ಲದಿರಲಿ, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನನ್ನ ಕೊನೆಯ ಉಸಿರು ಇರುವವರೆಗೂ ಶ್ರಮಿಸುತ್ತೇನೆ. ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ,ʼ ಎಂದು ಖರ್ಗೆ ಹೇಳಿದ್ದಾರೆ.

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

17 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago