Featured

ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ : ಡಿಸಿಎಂ  – Vishwanews24

ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ , ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ : ಡಿಸಿಎಂ

ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಮತ್ತಿತರರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ್ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ್ದರಿಂದ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ ಎಂದರು.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ. ಇಡೀ ದೇಶದಲ್ಲಿ 100 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಎನ್ಡಿಎ ಬದಲಾಯಿಸಿದೆ. ರಾಜ್ಯದಲ್ಲಿ 14 ಸ್ಥಾನಗಳನ್ನು ಬದಲಾಯಿಸಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇಂಡಿಯಾ ಒಕ್ಕೂಟ ಗೆದ್ದೇ, ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

19 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago