ಉಡುಪಿ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ. ಈ ಬಗ್ಗೆ ಅಪಪ್ರಚಾರದಲ್ಲಿ ನಿರತವಾಗಿದ್ದ ಬಿಜೆಪಿ ಇನ್ನಾದರೂ ಟೀಕೆ ಮಾಡುವುದುನ್ನು ನಿಲ್ಲಿಸಲಿ. ಹಿಂದೆ ಬಿಜೆಪಿ ಸರಕಾರ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಆದರೆ ಕಾಂಗ್ರೆಸ್ ಸರಕಾರ ಹೇಳಿದಂತೆ 5 ಭರವಸೆಗಳನ್ನು ಈಡೇರಿಸುವುದರ ಮೂಲಕ ನುಡಿದಂತೆ ನಡೆದಿದೆ. ಈ ಯೋಜನೆಗಳು ಎಲ್ಲಾ ಧರ್ಮ, ಜಾತಿ ಮತ್ತು ಪಕ್ಷಾತೀತವಾಗಿದ್ದು ರಾಜ್ಯ ಹಾಗೂ ಜಿಲ್ಲೆಯ ಜನತೆ ಇದರ ಪ್ರಯೋಜನ ಪಡೆಯಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…