ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಕಳ್ಳರ ಪಕ್ಷಗಳಾಗಿದ್ದು, ಇವುಗಳು ದರಿದ್ರ ಪಕ್ಷಗಳಾಗಿವೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆಯ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಡಾ.ರಾಜ್‍ಕುಮಾರ್ ಸಮಾಧಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಖುದ್ದು ಪೌರಕಾರ್ಮಿಕರ ಜೊತೆಗೂಡಿ ಕಸಗುಡಿಸಿದರು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗಿಲ್ಲ. ಅವರ ಆಂತರಿಕ ಕಚ್ಚಾಟದಿಂದಲೇ ಅವರಿಗೆ ಅಂತಹ ಪರಿಸ್ಥಿತಿ ಎದುರಾಗಿದೆ. ಶಾಸಕರಾದ ಶಿವರಾಮ್ ಹೆಬ್ಬಾರ್‍ರವರನ್ನು ಕೈಕಾಲು ಕಟ್ಟಿ ಕಿಡ್ನಾಪ್ ಮಾಡಿ ನಾವೇನು ಪಕ್ಷಕ್ಕೆ ಎಳೆದು ತಂದಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ದರಿದ್ರ ಪಕ್ಷಗಳು ಹಾಗೂ ಕಳ್ಳರ ಪಾರ್ಟಿಗಳು ಎಂದು ತಿಳಿದು ಅವರೇ ಹೊರ ಬಂದಿರಬಹುದು ಎಂದು ವ್ಯಂಗ್ಯವಾಡಿದರು,
ಯಾವುದೇ ಶಾಸಕರು ಬಿಜೆಪಿ ಬಂದರೆ ನಾವು ಅವರನ್ನು ಸ್ವಾಗತಿಸುತ್ತೇವೆಯೋ ಹೊರತು, ಆಪರೇಷನ್ ಕಮಲ ಮಾಡುತ್ತಿಲ್ಲ. ನಮ್ಮದು ಏನೇ ಇದ್ದರೂ ಆಪರೇಷನ್ ಸ್ವಚ್ಛ್ ಭಾರತ್ ಅಷ್ಟೇ. ಅವರ ಸರ್ಕಾರ ಬಿದ್ದರೆ ಅತಿ ದೊಡ್ಡ ಪಕ್ಷವಾಗಿರುವ ನಾವು ಸರ್ಕಾರ ರಚಿಸುವುದು ಖಚಿತ. ನಾವು ಆಪರೇಷನ್ ಕಮಲ ಮಾಡುತ್ತಿದ್ದೇವೆ ಎಂದು ಆರೋಪ ಮಾಡುತ್ತಿರುವ ಅವರು ಸುಮ್ಮನೆ ಕುಳಿತಿಲ್ಲ. ನಮ್ಮ ಬಿಜೆಪಿ ಶಾಸಕರಿಗೂ ಸಹ ಆಮೀಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ ಆಮೀಷವೊಡ್ಡಿರುವ ಶಾಸಕರನ್ನು ನಾನು ಕರೆದುಕೊಂಡು ಬಂದು ನಿಲ್ಲಿಸುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ಏಕೆ ಬಿಜೆಪಿ ಶಾಸಕರ ಹಿಂದೆ ಬೀಳಬೇಕು? ಅವರಿಗೇನಾದರೂ ಭಯ ಇದೆಯೇ? ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ ಅನ್ನುವ ರೀತಿ ದೊಡ್ಡ ದೊಡ್ಡ ಕಳ್ಳರು ಬೇರೆಯವರನ್ನು ಕಳ್ಳ ಅಂತಾ ತೋರಿಸ್ತಾ ಇದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…