ರಾಜ್ಯ ನ್ಯೂಸ್

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಬಿಜೆಪಿ ಸಜ್ಜು!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಭಾರತೀಯ ಜನತಾ ಪಾರ್ಟಿ ಸಜ್ಜಾಗಿದೆ.

ತೃತೀಯರಂಗದ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾದ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಬಿಜೆಪಿ ಹೈಕಮಾಂಡ್, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಚಂಡ ಗೆಲುವಿಗೆ ತಯಾರಿ ನಡೆಸಲು ಆರಂಭಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಬೈಕ್ ಜಾಥಗಳ ಮೂಲಕ ಮನವರಿಕೆ ಮಾಡಲು ಬಿಜೆಪಿ ಸಿದ್ಧವಾಗಿದೆ. ರಾಜ್ಯಾದ್ಯಂತ 5 ದಿನಗಳ ಕಾಲ ಬೃಹತ್ ಬೈಕ್ ರ‍್ಯಾಲಿಗಳ ಆಯೋಜನೆ ಮಾಡಿದ್ದು, ಜೂನ್ 15 ರಿಂದ 20 ರವರೆಗೆ ರಾಜ್ಯಾದ್ಯಂತ ಬೈಕ್ ರ‍್ಯಾಲಿ ನಡೆಸಲು ಪಕ್ಷ ತೀರ್ಮಾನಿಸಿದೆ.ಪ್ರತಿ ವಿಧಾನಸಭಾ ಕ್ಷೇತ್ರಗಳಿಗೊಂದರಂತೆ 5 ದಿನಗಳಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೈಕ್ ರ‍್ಯಾಲಿ ಕೈಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದು, ಪ್ರತಿ ಬೈಕ್ ರ‍್ಯಾಲಿವೂ ಯಶಸ್ವಿಯಾಗಬೇಕು. ಎಲ್ಲಾ ಕಡೆ ಬೈಕ್ ರ‍್ಯಾಲಿಗೆ ಭರ್ಜರಿ ರೆಸ್ಪಾನ್ಸ್ ಸಿಗುವಂತಾಗಬೇಕು. ಈ ಕುರಿತು ಆಯಾ ಜಿಲ್ಲೆಗಳ ಸಂಸದರು, ಜಿಲ್ಲಾಧ್ಯಕ್ಷರು, ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಪದಾಧಿಕಾರಿಗಳಿಗೆ ಬಿಎಸ್‍ವೈ ಖಡಕ್ ಸೂಚನೆ ನೀಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ…

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago