ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ನಂತರ ನಾವು ಬಿಜೆಪಿಗೆ ಹೋಗಬೇಕಿತ್ತೆಂದು ಅನಿಸಿತ್ತು : ಜೆಡಿಎಸ್ ಶಾಸಕ ಸುರೇಶ್ ಗೌಡ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಮಂಡ್ಯ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ನಂತರ ನಾವು ಬಿಜೆಪಿಗೆ ಹೋಗಬೇಕಿತ್ತು ಅನಿಸಿತ್ತು ಎಂದು ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿದ್ದೋದ ಮೇಲೆ ನಾವ್ಯಾಕೆ ಬಿಜೆಪಿ ಹೋಗ್ಲಿಲ್ಲ. ನಾವು ಹೋಗಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅನ್ನಿಸಿತ್ತು. ಆದರೆ, ಅನರ್ಹ ಶಾಸಕರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಅನ್ನಿಸುತ್ತಿದೆ ಎಂದು ಹೇಳಿದ್ದಾರೆ.

ಜಾಹಿರಾತು

ಸದ್ಯದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆಗೆ ಸಿದ್ಧವಾಗುವುದು ಒಳ್ಳೆಯದು. ಈಗಾಗಲೇ ನಮ್ಮ ವರಿಷ್ಠರು ಮಧ್ಯಂತರ ಚುನಾವಣೆಗೆ ತಯಾರಾಗುವಂತೆ ಹೇಳಿದ್ದಾರೆ ಎಂದರು.