ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ – Vishwanews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ – Vishwanews24

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ, ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆದು ಬುಧವಾರದಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ಜಿತಿನ್ ಬುಧವಾರ ಬೆಳಗ್ಗೆ ಪಿಯೂಷ್‌ ಗೋಯಲ್‌ ಅವರ ನಿವಾಸದಲ್ಲಿ ಸಭೆ ನಡೆಸಿದ್ದರು. ಗೃಹ ಸಚಿವ ಅಮಿತ್ ಅಮಿತ್ ಶಾ ಅವರ ನಿವಾಸಕ್ಕೂ ಭೇಟಿ ಮಾಡಿದ್ದರು. ಇನ್ನು ಬಿಜೆಪಿ ಮೂಲಗಳ ಪ್ರಕಾರ, 2022ರ ವಿಧಾನಸಭಾ ಚುನಾವಣೆಯಲ್ಲಿ ಜಿತಿನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾಗಿರುವ ಜಿತಿನ್ ರಾಜ್ಯದ ಕಾಂಗ್ರೆಸ್ಸಿನ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದರು.

ಈ ಸಂದರ್ಭದಲ್ಲಿ ಪ್ರತಕ್ರಿಯಿಸಿರುವ ಜಿತಿನ್ ಪ್ರಸಾದ, ‘ಕಾಂಗ್ರೆಸ್ ಜೊತೆ ಮೂರು ತಲೆಮಾರಿನ ಬಾಂಧವ್ಯವನ್ನು ಹೊಂದಿದ್ದು , ಇಂತಹ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಸಾಕಷ್ಟು ಚಿಂತನೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಭಾರತೀಯ ಯುವ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಜಿತಿನ್, ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 2004ರಲ್ಲಿ ಲೋಕಸಭೆಗೆ ಮೊದಲ ಬಾರಿ ಆಯ್ಕೆಯಾದರು. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.