Featured

ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಸಾಮರ್ಥ್ಯ ಹೊಂದಿದೆ : ಬಿ.ಕೆ ಹರಿಪ್ರಸಾದ್

ಬಾಗಲಕೋಟೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ ತಿಂಗಳ ಅವಧಿಯಲ್ಲಿ ಬಿಎಸ್ ವೈ ಸಿಎಮ್ ಆಗುತ್ತಾರೆ ಎಂಬ ರಂಭಾಪುರಿ ಶ್ರೀ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ‘ ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ಮಾತನಾಡೋದಿಲ್ಲ. ಸ್ವಾಮೀಜಿಗಳು ಅವರ ಅನಿಸಿಕೆ ಹೇಳಿದ್ದಾರೆ. ರಾಜಕಾರಣಿಗಳು ಹೇಳಿದ್ದರೆ ನಾ ಉತ್ತರ ಕೊಡುತ್ತಿದ್ದೆ. ಅವರು ಮಾತನಾಡುವ ವೇಳೆ ನಾವು ಮಾತನಾಡೋದು ತಪ್ಪು ‘ ಎಂದಿದ್ದಾರೆ.

‘ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಜೆಡಿಎಸ್ ಲೋಕಸಭಾ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಹೊಂದಿದೆ. ಜೆಡಿಎಸ್ ಕಾಂಗ್ರೆಸ್ ಯಾರಾದರೂ ಪ್ರಧಾನಿಯಾಗಲಿ. ಆದರೆ ಬಿಜೆಪಿ ಪಕ್ಷದವರನ್ನು ಬಿಟ್ಟು ಯಾರಾದರೂ ಪ್ರಧಾನಿಯಾಗ್ತಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆಯ್ಕೆ ಬಗ್ಗೆ ರಾಹುಲ್ ಗಾಂಧಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ‘ ಎಂದು ಹೇಳಿದ್ದಾರೆ.

ಸಭಾಪತಿ ಆಯ್ಕೆ ಗೊಂದಲ ವಿಚಾರವಾಗಿ ಮಾತನಾಡಿರುವ ಅವರು ‘ ಸಮ್ಮಿಶ್ರ ಸರಕಾರ ಅಂದ ಮೇಲೆ ಚರ್ಚೆಗಳು,ಗೊಂದಲಗಳು ಸಾಮಾನ್ಯ. ಈ ಬಗ್ಗೆ ಸಮನ್ವಯ ಸಮಿತಿ ಇದೆ ಸಮಿತಿ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ‘ ಎಂದಿದ್ದಾರೆ.

ಸಮ್ಮಿಶ್ರ ಸರಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂಬ ಡಿವಿ ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಹರಿಪ್ರಸಾದ್ ‘ ಸದಾನಂದಗೌಡ ಓರ್ವ ರಾಜಕೀಯ ಪಂಡಿತ, ಭವಿಷ್ಯ ನುಡಿತಕ್ಕಂತವರು ಅವರ ಭವಿಷ್ಯ ಏನಾಗುತ್ತದೆ ಅಂತ ಎಲ್ಲರೂ ನೋಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ನಿಗಮ ಮಂಡಳಿ ಆಯ್ಕೆ ವಿಚಾರವಾಗಿ ‘ ಮೊದಲನೇ ಹಂತದಲ್ಲಿ ಹಿರಿಯ ಶಾಸಕರಿಗೆ ಕೊಡುವ ತೀರ್ಮಾನ ಮಾಡಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು ‘ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

16 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

18 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

18 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

19 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

19 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

19 hours ago