Featured

ಕಾಂಗ್ರೆಸ್ ದೇಶದ ಶಕ್ತಿ , ದೇಶದ ಇತಿಹಾಸ ; ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ : ಡಿ.ಕೆ. ಶಿ – Vishwanews24

ಈ ದೇಶಕ್ಕೆ ಧ್ವಜ, ರಾಷ್ಟ್ರಗೀತೆ ಕೊಟ್ಟಿದ್ದು ಕಾಂಗ್ರೆಸ್..

ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ದೇಶದ ಇತಿಹಾಸ ; ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ

ನಮ್ಮದು ತ್ಯಾಗ ಮತ್ತು ಬಲಿದಾನದ ಇತಿಹಾಸ..

ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೂ ಬಿಜೆಪಿ ಇತಿಹಾಸಕ್ಕೂ ವ್ಯತ್ಯಾಸವಿದೆ..

ಕಾಂಗ್ರೆಸ್ ಪಕ್ಷದ 137ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿ

ಮಂಡ್ಯ, : ಇದೊಂದು ಐತಿಹಾಸಿಕ ಸ್ಥಳ. ನಾನು ಬಂದಾಗ ಸೇವಾದಳದ ಸ್ನೇಹಿತರಾದ ರಾಮಚಂದ್ರ ಅವರು ನೂತನ ರಾಜ್ಯಾಧ್ಯಕ್ಷರಾಗಿ ಶಿವಪುರದ ವೀರಸೌಧದಲ್ಲಿ ನನ್ನಿಂದ ಧ್ವಜಾರೋಹಣ ಮಾಡಿಸಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಅವರಿಗೆ ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ಮದ್ದೂರು ತಾಲ್ಲೂಕಿನ ಶಿವಪುರದಲ್ಲಿ ಕಾಂಗ್ರೆಸ್ ಪಕ್ಷದ 137ನೇ ವರ್ಷದ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ದೇಶದ ಇತಿಹಾಸ. ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೂ ಬಿಜೆಪಿ ಇತಿಹಾಸಕ್ಕೂ ವ್ಯತ್ಯಾಸವಿದೆ. ಆರ್‍ಎಸ್‍ಎಸ್ ಜನ ಸಂಘ ಆನಂತರ ಪರಿವರ್ತನೆಯಾಯಿತು. ನಮ್ಮದು ತ್ಯಾಗ ಮತ್ತು ಬಲಿದಾನದ ಇತಿಹಾಸ. ಶಿವಪುರ ಹಾಗೂ ಮಂಡ್ಯ ಸಹ ಇತಿಹಾಸ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಜತೆ ಬೆಸೆದುಕೊಂಡಿದೆ. ಇಲ್ಲಿ ತ್ರಿವರ್ಣ ಧ್ವಜ ಹಾರಿಸಬಾರದು ಎಂದು ಬ್ರಿಟೀಷರು ನಿರ್ಬಂಧ ಹಾಕಿದ್ದನ್ನು ವಿರೋಧಿಸಿ ಹೋರಾಟಗಾರರು ಧ್ವಜ ಹಾರಿಸಿದ್ದು ಈಗ ಇತಿಹಾಸ ಎಂದರು.

ಯಾರಿಗೂ ಅಧಿಕಾರ ಶಾಶ್ವತವಲ್ಲ. ನಾನು ಶಾಶ್ವತವಾಗಿ ಇರುವುದಿಲ್ಲ. ಆದರೆ ನಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೇವೆ ಎಂಬುದು ಮುಖ್ಯ ಎಂದರು, ಕೋವಿಡ್ ಕಾಲದಲ್ಲಿ ಜನ ಮನೆಯಿಂದ ಹೊರಗೆ ಬರಲು ಹೆದರುವಾಗ, ನಾವ್ಯಾರು ಮನೆಯಲ್ಲಿ ಕೂರಲಿಲ್ಲ. ನಾನು, ನಮ್ಮ ಕಾರ್ಯಾಧ್ಯಕ್ಷರ ತಂಡ ಹಾಗೂ ನಾಯಕರು ಹಗಲಿರುಳು ಕೋವಿಡ್ ವಿರುದ್ಧ ಹೋರಾಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಪ್ರಾಣ ಒತ್ತೆ ಇಟ್ಟು ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದ್ದಾರೆ ಎಂದರು.

 

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago