ಮಂಡ್ಯ, : ಇದೊಂದು ಐತಿಹಾಸಿಕ ಸ್ಥಳ. ನಾನು ಬಂದಾಗ ಸೇವಾದಳದ ಸ್ನೇಹಿತರಾದ ರಾಮಚಂದ್ರ ಅವರು ನೂತನ ರಾಜ್ಯಾಧ್ಯಕ್ಷರಾಗಿ ಶಿವಪುರದ ವೀರಸೌಧದಲ್ಲಿ ನನ್ನಿಂದ ಧ್ವಜಾರೋಹಣ ಮಾಡಿಸಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅವರಿಗೆ ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಮದ್ದೂರು ತಾಲ್ಲೂಕಿನ ಶಿವಪುರದಲ್ಲಿ ಕಾಂಗ್ರೆಸ್ ಪಕ್ಷದ 137ನೇ ವರ್ಷದ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ದೇಶದ ಇತಿಹಾಸ. ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೂ ಬಿಜೆಪಿ ಇತಿಹಾಸಕ್ಕೂ ವ್ಯತ್ಯಾಸವಿದೆ. ಆರ್‍ಎಸ್‍ಎಸ್ ಜನ ಸಂಘ ಆನಂತರ ಪರಿವರ್ತನೆಯಾಯಿತು. ನಮ್ಮದು ತ್ಯಾಗ ಮತ್ತು ಬಲಿದಾನದ ಇತಿಹಾಸ. ಶಿವಪುರ ಹಾಗೂ ಮಂಡ್ಯ ಸಹ ಇತಿಹಾಸ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಜತೆ ಬೆಸೆದುಕೊಂಡಿದೆ. ಇಲ್ಲಿ ತ್ರಿವರ್ಣ ಧ್ವಜ ಹಾರಿಸಬಾರದು ಎಂದು ಬ್ರಿಟೀಷರು ನಿರ್ಬಂಧ ಹಾಕಿದ್ದನ್ನು ವಿರೋಧಿಸಿ ಹೋರಾಟಗಾರರು ಧ್ವಜ ಹಾರಿಸಿದ್ದು ಈಗ ಇತಿಹಾಸ ಎಂದರು.
ಯಾರಿಗೂ ಅಧಿಕಾರ ಶಾಶ್ವತವಲ್ಲ. ನಾನು ಶಾಶ್ವತವಾಗಿ ಇರುವುದಿಲ್ಲ. ಆದರೆ ನಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೇವೆ ಎಂಬುದು ಮುಖ್ಯ ಎಂದರು, ಕೋವಿಡ್ ಕಾಲದಲ್ಲಿ ಜನ ಮನೆಯಿಂದ ಹೊರಗೆ ಬರಲು ಹೆದರುವಾಗ, ನಾವ್ಯಾರು ಮನೆಯಲ್ಲಿ ಕೂರಲಿಲ್ಲ. ನಾನು, ನಮ್ಮ ಕಾರ್ಯಾಧ್ಯಕ್ಷರ ತಂಡ ಹಾಗೂ ನಾಯಕರು ಹಗಲಿರುಳು ಕೋವಿಡ್ ವಿರುದ್ಧ ಹೋರಾಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಪ್ರಾಣ ಒತ್ತೆ ಇಟ್ಟು ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದ್ದಾರೆ ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…