ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಸಮಾಧಾನದ ನಡುವೆ ಶಾಸಕ ಪ್ರದೀಪ್ ಈಶ್ವರ್ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ. ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ, ಕಾಂಗ್ರೆಸ್ ನಮ್ಮ ಗರ್ಭಗುಡಿ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ನಮ್ಮ ನಾಯಕರು. ಸಾಮಾನ್ಯನಾದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ. ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನೇ ನಾನು ಪಾಲಿಸುತ್ತೇನೆ ಎಂದರು.
ಇದನ್ನೂ ಓದಿ:
ಜೈ ಕಾಂಗ್ರೆಸ್. ನಾನು ಇನ್ನೂ 30 ವರ್ಷ ಕಾಯಲು ಸಿದ್ಧನಿದ್ದೇನೆ. ನನಗೆ ವಯಸ್ಸಿದೆ, ಅವಕಾಶಕ್ಕಾಗಿ ಕಾಯುತ್ತೇನೆ. ಸಭೆ ನಡೆಸುತ್ತಿರುವವರಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಆದ್ದರಿಂದ ಆ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.
ಸಚಿವ ಸ್ಥಾನ ಕುರಿತು ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂಬ ಆಸೆ ಇರುವುದು ಸಹಜ. ಆದರೆ ಈಗಲೇ ಸಿಗಬೇಕು ಎಂಬ ಹಠ ಇಲ್ಲ. ಹಿರಿಯರಿಗೆ ಅವಕಾಶ ಸಿಕ್ಕಿದೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…
7 ಮಂದಿಯ ಭೀಕರ ಹತ್ಯೆ : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್ ಕೇಸ್ ಬಗ್ಗೆ ಪೊಲೀಸ್ ಆಯುಕ್ತರ ಹೇಳಿಕೆ ಬೆಂಗಳೂರು:…
ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…
ಗಂಗೊಳ್ಳಿ: ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…