ನವದೆಹಲಿ,: ಪಕ್ಷವು ತನ್ನ ಚುನಾವಣಾ ಭವಿಷ್ಯವನ್ನು ಪುನರುಜ್ಜೀವನಗೊಳಿಸುವ ಕಾರ್ಯತಂತ್ರದ ಭಾಗವಾಗಿ ” ಒಂದು ಕುಟುಂಬ, ಒಂದೇ ಟಿಕೆಟ್” ಎಂಬ ನಿಯಮವನ್ನು ಕಾಂಗ್ರೆಸ್ ಅಂಗೀಕರಿಸಿದ್ದು ಆದರೆ, ಈ ನಿಯಮದಿಂದ ‘ಗಾಂಧಿ’ ಕುಟುಂಬ ಅನ್ವಯವಾಗುದಿಲ್ಲ ಎಂದು ವರದಿಯಾಗಿದೆ.
“ಒಂದು ಕುಟುಂಬ, ಒಂದು ಟಿಕೆಟ್” ಎಂಬ ಪ್ರಸ್ತಾಪವನ್ನು ಕಾಂಗ್ರೆಸ್ ಸಂಪೂರ್ಣವಾಗಿ ಒಪ್ಪಿದ್ದು, ಕನಿಷ್ಠ ಐದು ವರ್ಷಗಳ ಕಾಲ ಪಕ್ಷಕಾಗಿ ದುಡಿದರೆ ಮಾತ್ರ ಕುಟುಂಬದ ಇನ್ನೊಬ್ಬ ಸದಸ್ಯನಿಗೆ ಟಿಕೆಟ್ ಸಿಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕನ್ ಸ್ಪಷ್ಟಪಡಿಸಿದ್ದಾರೆ.
“ನಿರಂತರವಾಗಿ ಹುದ್ದೆಯಲ್ಲಿರುವ ಯಾವುದೇ ವ್ಯಕ್ತಿ ಆ ಹುದ್ದೆಯಿಂದ ಕೆಳಗಿಳಿಯಬೇಕಾಗುತ್ತದೆ ಮತ್ತು ಅದೇ ಹುದ್ದೆಗೆ ಹಿಂತಿರುಗಬೇಕಾದರೆ ಮೂರು ವರ್ಷಗಳ ಕಾಯಬೇಕಾಗುತ್ತದೆ. ಪ್ರತಿ ಹಂತದಲ್ಲೂ ಯುವಕರಿಗೆ ಸಂಸ್ಥೆಯಲ್ಲಿ ಶೇ.50ರಷ್ಟು ಜಾಗ ನೀಡಬೇಕು ಎಂದು ಚಿಂತನ ಶಿಬಿರದಲ್ಲಿ ಪ್ರಸ್ತಾಪಿಸಲಾಗಿದೆ “ಎಂದು ಅಜಯ್ ಮಾಕನ್ ಹೇಳಿದ್ದಾರೆ.
ವರದಿಯ ಪ್ರಕಾರ, ‘ಒಂದು ಕುಟುಂಬ, ಒಂದು ಟಿಕೆಟ್’ ನಿಯಮವನ್ನುಕಾಂಗ್ರೆಸ್‌ನಲ್ಲಿ ಸಂಪೂರ್ಣ ಸಹಮತದಿಂದ ಅನುಮೋದಿಸಿದರೂ, ಈ ನಿಯಮ ಗಾಂಧಿ ಕುಟುಂಬಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…