Featured

ಕಾಂಗ್ರೆಸ್ ನಲ್ಲಿ ಮುಂದುವರೆದ `CM’ ಹುದ್ದೆ ಪೈಪೋಟಿ : ಇಂದೇ ಅಧಿಕೃತ ಘೋಷಣೆ ಸಾಧ್ಯತೆ – Vishwanews24

ಕಾಂಗ್ರೆಸ್ ನಲ್ಲಿ ಮುಂದುವರೆದ `CM’ ಹುದ್ದೆ ಪೈಪೋಟಿ : ಇಂದೇ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವಂತ ಸಾಲು ಸಾಲು ಸಭೆಯಲ್ಲಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ದೆಹಲಿಯಲ್ಲಿ ಇಂದು ಬೆಳಿಗ್ಗೆ 11ಕ್ಕೆ ಸಿಎಂ ಆಯ್ಕೆ ಬಗ್ಗೆ ಫೈನ್ ಮೀಟಿಂಗ್ ನಡೆಯಲಿದೆ. ಈ ಬಳಿಕ ಕರ್ನಾಟಕದ ಮುಂದಿನ ಸಿಎಂ ಹೆಸರು ಪ್ರಕಟವಾಗಲಿದೆ.

ದೆಹಲಿಯಲ್ಲಿ ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಾಲು ಸಾಲು ಸಭೆ ನಡೆಸಲಾಯಿತು. ಮೊದಲು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೆ.ಸಿ ವೇಣುಗೋಪಾಲ್, ಸುರ್ಜೇವಾಲಾ ಸೇರಿದಂತೆ ಎಐಸಿಸಿ ಅಧ್ಯಕ್ಷರು ಭಾಗಿಯಾಗಿ ಸಭೆಯಲ್ಲಿ ಚರ್ಚಿಸಿದರು. ಈ ಬಳಿಕ ಸಿಎಂ ರೇಸ್ ನಲ್ಲಿರುವಂತ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಅವರನ್ನು ಓನ್ ಟು ಒನ್ ಕರೆದು ಖರ್ಗೆ ಚರ್ಚಿಸಿದರು.

ಈವರೆಗೆ ಡಿಕೆಶಿ ಹಾಗೂ ಸಿದ್ದು ಸಿಎಂ ಸ್ಥಾನ ಬಿಟ್ಟು ಬೇರೆ ಯಾವುದೇ ಹುದ್ದೆ ಬೇಡ ಎನ್ನುವ ಬಗ್ಗೆ ಬಿಲ್ ಖುಲ್ ಹೈಕಮಾಂಡ್ ಗೆ ಹೇಳಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಪಟ್ಟು ಸಡಿಲಸದ ಹಿನ್ನಲೆಯಲ್ಲಿ, ಸಿಎಂ ಆಯ್ಕೆ ಕಸರತ್ತು ಕೊನೆಗೊಳ್ಳುವ ಲಕ್ಷಣಗಳು ಕಾಣಲಿಲ್ಲ.

ಖರ್ಗೆ ಭೇಟಿಯಾದಂತ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಹೊರತಾಗಿ ಬೇರೆ ಹುದ್ದೆ ಬೇಡ ಎಂದರೇ, ಸಿದ್ಧರಾಮಯ್ಯ ಕೂಡ ನನಗೆ ಮುಖ್ಯಮಂತ್ರಿ ಹುದ್ದೆಯೇ ಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಇಬ್ಬರು ನಾಯಕರು ಸಿಎಂ ಹುದ್ದೆಗಾಗಿ ಪಟ್ಟು ಹಿಡಿದ ಕಾರಣ ನಿನ್ನೆಯೂ ಕೂಡ ಸಿಎಂ ಆಯ್ಕೆಯನ್ನು ಹೈಕಮಾಂಡ್ ಅಂತಿಮಗೊಳಿಸಲು ಸಾಧಅಯವಾಗಿಲ್ಲ.

ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 11ಕ್ಕೆ ಕೊನೆಯ ಸಭೆ ನಡೆಯಲಿದೆ ಎನ್ನಲಾಗುತ್ತಿದೆ. ಈವರೆಗೆ ಸಿಎಲ್ ಪಿ ನಾಯಕನ ಹೆಸರು ಆಯ್ಕೆಗಾಗಿ ವೀಕ್ಷಕರ ವರದಿ, ಶಾಸಕರ ಅಭಿಪ್ರಾಯ, ಆಕಾಂಕ್ಷಿಗಳ ಅಭಿಪ್ರಾಯವನ್ನು ಸಂಗ್ರಹಿಸದಂತೆ ಸಭೆ ನಡೆಯಲಿದೆ. ಈ ಎಲ್ಲಾವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಭಾಗಿಯೊಂದಿಗೆ ಒಟ್ಟಾಗಿ ಚರ್ಚಿಸಿ, ಫೈಲನ್ ಮಾಡಲಿದ್ದಾರೆ.

ಇಂದು ಬೆಳಿಗ್ಗೆ 11ಕ್ಕೆ ನವದೆಹಲಿಯಲ್ಲಿ ನಡೆಯಲಿರುವಂತ ಸಭೆ ತೀವ್ರ ಕುತೂಹಲ ಮೂಡಿಸಿದ್ದು, ಇಂದೇ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವ ಹೆಸರು ಕೂಡ ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago