ಕಾಂಗ್ರೆಸ್ ನವರು ದೇಶಕ್ಕಾಗಿ ಬಲಿದಾನ ಕೊಟ್ಟವರು ,ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಈಶ್ವರ್ ಖಂಡ್ರೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ನವರು ದೇಶಕ್ಕಾಗಿ ಬಲಿದಾನ ಕೊಟ್ಟವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಯೂಥ್ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,ದೇಶದಲ್ಲಿ ಹಸಿರು ಕ್ರಾಂತಿ ತಂದಿದ್ದು ಕಾಂಗ್ರೆಸ್, ಸ್ಮಾರ್ಟ್ ಫೋನ್ ಯುಗ ಪ್ರಾರಂಭವಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ನೆರೆ ಸಂತ್ರಸ್ತರ ನೋವಿಗೆ ಪ್ರಧಾನಿ ಮೋದಿ ಸ್ಪಂದನೆ ಮಾಡಿಲ್ಲ. 18 ವರ್ಷದ ಯುವಕರಿಗೆ ಮತದಾನ ಹಕ್ಕು ಕೊಟ್ಟಿದ್ದು ರಾಜೀವ್ ಗಾಂಧಿ. ಆಹಾರ ಭದ್ರತೆ ದೇಶದಲ್ಲಿ ತಂದಿದ್ದು ಕಾಂಗ್ರೆಸ್. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಅಪಾರ. ಬಿಜೆಪಿಯವರು ಏನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸೋನಿಯಾ ಗಾಂಧಿ ಅವರಿಗೆ ಪ್ರಧಾನಿಯಾಗುವ ಅವಕಾಶ ಇದ್ದರೂ, ದೇಶಕ್ಕಾಗಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಆಧುನಿಕ ಭಾರತ ನಿರ್ಮಾಣ ಮಾಡಿದ ಶ್ರೇಯಸ್ಸು ಕಾಂಗ್ರೆಸ್ಸಿಗೆ ಸಲ್ಲುತ್ತದೆ. ಯುವಕರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇತಿಹಾಸ ತಿಳಿಸುವ ಕೆಲಸ ನಮ್ಮ ಕಾರ್ಯಕರ್ತರು ಮಾಡಬೇಕು. ಬಿಜೆಪಿಯವರು ಸುಳ್ಳು ಹೇಳುವುದನ್ನು ಬಿಟ್ಟು ಇನ್ನೇನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.