ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್‌ – ಆಸ್ಪತ್ರೆಗೆ ದಾಖಲು -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದ ಅವರು ಸೋಮವಾರ ರಾತ್ರಿ 11.30ಕ್ಕೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಬಗ್ಗೆ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಟ್ವೀಟ್ ಮೂಲಕ ತಿಳಿಸಿದ್ದಾರೆ.

”ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ” ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.