Featured

ಬಂಟ್ವಾಳ: ಕಾಂಗ್ರೆಸ್ ನಾಯಕ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ.ಹಂಝ ಬಿಜೆಪಿ ಸೇರ್ಪಡೆ -Vishwanews24

ಕಾಂಗ್ರೆಸ್ ನಾಯಕ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ.ಹಂಝ ಬಿಜೆಪಿ ಸೇರ್ಪಡೆ -Vishwanews24

ಬಂಟ್ವಾಳ: ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಗ್ರಾಮಮಟ್ಟದಲ್ಲೂ ಇತರ ಪಕ್ಷಗಳಿಂದ ಬಿಜೆಪಿ ಸಿದ್ಧಾಂತ ಒಪ್ಪಿ ಬರುವವರನ್ನು ಮುಕ್ತವಾಗಿ ಸ್ವಾಗತಿಸುವ ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ.ಹಂಝ ಬಿಜೆಪಿಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಸಮ್ಮುಖದಲ್ಲಿ ಡಿ.ಕೆ.ಹಂಝ ಅವರನ್ನು ಪಕ್ಷದ ಧ್ವಜ ನೀಡಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಬರಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಮುಂದಿನ ಹಂತದಲ್ಲಿ ಕಾಂಗ್ರೆಸ್ ನ ದೊಡ್ಡ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿರುವ ಸುಳಿವು ನೀಡಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಕಾಂಗ್ರೇಸ್ ಸೇರಿದಂತೆ ಇತರ ಪಕ್ಷಗಳ ಒಳ್ಳೆಯ ಕಾರ್ಯಕರ್ತರನ್ನು ಪಕ್ಷದ ಸಿದ್ಧಾಂತದಡಿಯಲ್ಲಿ ಸ್ವಾಗತಿಸುವುದಾಗಿ ತಿಳಿಸಿದರು.

ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ. ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ. ಕ್ಷೇತ್ರ ಉಪಾಧ್ಯಕ್ಷ ರೊನಾಲ್ಡ್ ಡಿಸೋಜ, ಪ್ರ.ಕಾರ್ಯದರ್ಶಿ ಡೊಂಬಯ ಅರಳ. ರೈತಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ. ಕಾರ್ಯದರ್ಶಿಗಳಾದ ರಮನಾಥ ರಾಯಿ. ಗಣೇಶ್ ರೈ ಮಾಣಿ. ಸೀತಾರಾಮ ಪೂಜಾರಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಉಪಸ್ಥಿತರಿದ್ದರು.ಇದೇ ವೇಳೆ ಜಗದೀಶ್ ಶೆಟ್ಟಿ ಮಾವಂತೂರು, ಚಂದ್ರಹಾಸ ಅರಳ. ಮುಸ್ತಾಫ ಮೂಲರಪಟ್ಣ ಸಹಿತ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago