ಚಿಕ್ಕಮಗಳೂರು: “ರಾಹುಲ್ ಗಾಂಧಿ ಕಾಲಿಟ್ಟ ಪ್ರದೇಶದಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. ಕಾಂಗ್ರೆಸ್ ನಾಯಕರಿಗೆ ಸಾಲು ಸಾಲು ಸೋಲಿನಿಂದ ಬುದ್ದಿಭ್ರಮಣೆಯಾಗಿದ್ದು, ಹೀಗಾಗಿ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಬ್ರಿಟಿಷರನ್ನು ದೇಶ ಬಿಟ್ಟು ಓಡಿಸಿದವರಿಗೆ ನರೇಂದ್ರ ಮೋದಿಯನ್ನು ಓಡಿಸುವುದು ಕಷ್ಟಕರವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ರಾಹುಲ್ ಗಾಂಧಿಗೆ ಚಿಕಿತ್ಸೆಯ ನೀಡುವ ಅಗತ್ಯವಿದೆ. ಚುನಾವಣೆಗಾಗಿ ನೀರಿಗಿಳಿಯೋದು, ಹಾಡು ಹೇಳೋದು, ಡ್ಯಾನ್ಸ್ ಮಾಡುವುದನ್ನು ನೋಡಬಹುದಾಗಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಾ ಹೋಗುತ್ತಿದೆ. ಗೆಲುವು ಕಾಣದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ದೊರಕಿಲ್ಲ” ಎಂದು ಟೀಕಿಸಿದ್ದಾರೆ.
”ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡೊದನ್ನು ನೋಡಬಹುದಾಗಿದೆ ಎಂದು ವ್ಯಂಗ್ಯವಾಡಿದರು
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…