ಕಾಂಗ್ರೆಸ್ ನ ಎಲ್ಲರ ಹೃದಯದಲ್ಲಿಯೂ ರಾಮನಿದ್ದಾನೆ : ಡಿ.ಕೆ.ಶಿವಕುಮಾರ್ -Vishwanews24

Featured, ರಾಜ್ಯ ನ್ಯೂಸ್

ಕಲಬುರಗಿ: ರಾಮ ಮಂದಿರ ನಿರ್ಮಾಣ ಯಾರ ಸ್ವತ್ತಲ್ಲ. ಅದು ದೇಶದ ಜನರ ಹೃದಯ ಶ್ರೀಮಂತಿಕೆಯ ಪ್ರತೀಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ನಮಗೇನು ಆಹ್ವಾನ ನೀಡುವುದು ಬೇಕಿಲ್ಲ. ನಾನು ಟಿವಿಯಲ್ಲೇ ನೋಡಿ ಸಂತಸ ಪಡುತ್ತೇವೆ. ಕಾಂಗ್ರೆಸ್ ನ ಎಲ್ಲರ ಹೃದಯದಲ್ಲಿಯೂ ರಾಮನಿದ್ದಾನೆ ಎಂದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇಲ್ಲ. ನಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ.

ಕೊವೀಡ್ -19 ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಭಾರೀ ಲೂಟಿ ಮಾಡುತ್ತಿದ್ದು, ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೊರೋನಾ ಸೋಂಕು ಕಂಡು ಬಂದ ನಂತರದಿಂದ ಸರ್ಕಾರ ಹಣ ಲೂಟಿಯಲ್ಲಿ ತೊಡಗಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಪ್ರತಿಯೊಬ್ಬ ಸಚಿವರು ತಮಗೆಷ್ಟು ಸಿಗುತ್ತದೆ ಎಂದು ಯೋಚಿಸುತ್ತಿದ್ದಾರೆ. ಹೀಗಾಗಿ, ನಾವು ಸರ್ಕಾರಕ್ಕೆ ಲೆಕ್ಕ ಕೇಳುವ ಅಭಿಯಾನ ಆರಂಭಿಸಿದ್ದೇವೆ ಎಂದು ಹೇಳಿದರು.