Featured

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ – vishwanews24

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲುಂಟಾಗಿರುವುದಕ್ಕೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಹೆಚ್‌ಡಿಕೆ, “1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

“ಅಂದು: ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರ್ಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ” ಎಂದು ಪೋಸ್ಟ್ ಮಾಡಿದ್ದಾರೆ.

“ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :

“ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ” ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago