ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಸತ್ ಭವನದಸೆಂಟ್ರಲ್ ಹಾನ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆ ಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ನೂತನ 52 ಮಂದಿ ಕಾಂಗ್ರೆಸ್ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನ ರಂದೀಪ್ ಸುರ್ಜೇವಾಲಾ, “ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟ 12.13 ಕೋಟಿ ಜನರಿಗೆ ಅವರು ಧನ್ಯವಾದ ಹೇಳಿದ್ದಾರೆ,” ಎಂದು ಟ್ವೀಟ್ ಮಾಡಿದ್ದಾರೆ.
ಸಭೆಯಲ್ಲಿ ಸಂಸತ್ ಕಲಾಪದಲ್ಲಿ ಈ ಬಾರಿ ಆಡಳಿತ ಪಕ್ಷದ ವಿರುದ್ಧ ಆರ್ಥಿಕ ಕುಂಠಿತ, ನಿರುದ್ಯೋಗ ಮತ್ತು ಇತರ ಕೆಲ ವಿಚಾರಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಬೇಕು ಎನ್ನುವ ಬಗ್ಗೆಯೂ ಚರ್ಚೆಗಳಾಗಿವೆ.
ಸಂಸತ್ ಕಲಾಪದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವ ವಿಚಾರಗಳನ್ನು ಎತ್ತಬೇಕು ಎನ್ನುವ ಕುರಿತೂ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಆರ್ಥಿಕ ಕುಂಠಿತ, ನಿರುದ್ಯೋಗಮತ್ತು ಇತರಕೆಲ ವಿಚಾರಗಳನ್ನು ಹೋರಾಟಕ್ಕೆ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…