Featured

ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕಿಯಾಗಿ  ಸೋನಿಯಾ ಗಾಂಧಿ ನೇಮಕ -Vishwanews24

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದ ಸಂಸದೀಯ ಪಕ್ಷದ ನಾಯಕಿಯಾಗಿ  ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಸತ್‌ ಭವನದಸೆಂಟ್ರಲ್‌ ಹಾನ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಸಂಸದರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆ ಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ನೂತನ 52 ಮಂದಿ ಕಾಂಗ್ರೆಸ್‌ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.

ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್ ನ ರಂದೀಪ್ ಸುರ್ಜೇವಾಲಾ​, “ಸೋನಿಯಾ ಗಾಂಧಿ ಅವರು ಕಾಂಗ್ರೆಸ್​ ಸಂಸದೀಯ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್​​ ಮೇಲೆ ನಂಬಿಕೆ ಇಟ್ಟ 12.13 ಕೋಟಿ ಜನರಿಗೆ ಅವರು ಧನ್ಯವಾದ ಹೇಳಿದ್ದಾರೆ,” ಎಂದು ಟ್ವೀಟ್ ಮಾಡಿದ್ದಾರೆ.

ಸಭೆಯಲ್ಲಿ ಸಂಸತ್‌ ಕಲಾಪದಲ್ಲಿ ಈ ಬಾರಿ ಆಡಳಿತ ಪಕ್ಷದ ವಿರುದ್ಧ ಆರ್ಥಿಕ ಕುಂಠಿತ, ನಿರುದ್ಯೋಗ ಮತ್ತು ಇತರ ಕೆಲ ವಿಚಾರಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಬೇಕು ಎನ್ನುವ ಬಗ್ಗೆಯೂ ಚರ್ಚೆಗಳಾಗಿವೆ.

ಸಂಸತ್‌ ಕಲಾಪದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವ ವಿಚಾರಗಳನ್ನು ಎತ್ತಬೇಕು ಎನ್ನುವ ಕುರಿತೂ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಆರ್ಥಿಕ ಕುಂಠಿತ, ನಿರುದ್ಯೋಗಮತ್ತು ಇತರಕೆಲ ವಿಚಾರಗಳನ್ನು ಹೋರಾಟಕ್ಕೆ ಅಸ್ತ್ರವನ್ನಾಗಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

3 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

3 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

3 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

3 hours ago