ಕಾಂಗ್ರೆಸ್ ನ 25 ಅಭ್ಯರ್ಥಿಗಳ ಹೆಸರು ಫೈನಲ್ : ಇಂದು ಅಥವಾ ನಾಳೆ 3 ನೇ ಪಟ್ಟಿ ಪ್ರಕಟ ..! Vishwanews24
ಕಾಂಗ್ರೆಸ್ ನ 25 ಅಭ್ಯರ್ಥಿಗಳ ಹೆಸರು ಫೈನಲ್ : ಇಂದು ಅಥವಾ ನಾಳೆ 3 ನೇ ಪಟ್ಟಿ ಪ್ರಕಟ ..!
ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪೈಕಿ ಬಾಕಿ ಉಳಿದಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಪೈಕಿ ಇಂದು ಅಥವಾ ನಾಳೆ ಕಾಂಗ್ರೆಸ್ ನ ಸುಮಾರು 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ಈಗಾಗಲೇ ಎರಡು ಹಂತಗಳಲ್ಲಿ 166 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಉಳಿದ 58 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಸಭೆ ನಡೆದಿದ್ದು, ಈ ಪೈಕಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದು ಅಥವಾ ನಾಳೆ 3 ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
