ಮಂಗಳೂರು, : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬ ಕೆಲ ಮುಸ್ಲಿಂ ನಾಯಕರ ಬೇಡಿಕೆಗೆ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರು ಅತೀ ಹೆಚ್ಚು ಸಂಖ್ಯೆಯಲ್ಲಿದ್ದು, ಇವರನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆಯೇ ಹೊರತು ಯಾವುದೇ ಸ್ಥಾನಮಾನಗಳು ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಈ ಸಾರಿಯ ಲೋಕಸಭಾ ಟಿಕೆಟ್ ಮುಸ್ಲಿಮ್ ಅಭ್ಯರ್ಥಿಗೆ ನೀಡಬೇಕೆಂಬ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ.
ಮುಸ್ಲಿಂ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು ಸಭೆ ನಡೆಸಿ ತಮ್ಮ ಹಕ್ಕೊತ್ತಾಯ ಮಾಡಿರುವುದು ನ್ಯಾಯಯುತ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮುಸ್ಲಿಂ ನಾಯಕರು ಸುಮ್ಮನೆ ಕುಳಿತುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಇದಕ್ಕಾಗಿ ದೊಡ್ಡ ಹೋರಾಟ ನಡೆಸಿ. ಇಲ್ಲದಿದ್ದರೆ ನಿಮಗೆ ಟಿಕೆಟ್ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಬೇಕು ಎಂದು ಈ ಹಿಂದೆಯೂ ಮಾತುಗಳು ಕೇಳಿಬರುತ್ತಿತ್ತು. ಆದರೆ ಅದಕ್ಕೆ ಯಾವುದೇ ಮನ್ನಣೆ ಸಿಕ್ಕಿರಲಿಲ್ಲ. ದಶಕಗಳ ಹಿಂದಿನಿಂದಲೇ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆಗಳು ಕೇಳಿ ಬರುತ್ತಿದ್ದು, ಈ ಕುರಿತಾದಂತೆ ಹೋರಾಟ ನಡೆಸಬೇಕು ಎಂದು ಜನಾರ್ದನ ಪೂಜಾರಿಯವರು ತಿಳಿಸಿದ್ದಾರೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…