ಮಂಗಳೂರು:ಹಳೇ ಬಂದರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮಂಗಳೂರು ದಕ್ಷಿಣ ವಿಧಾನಸಭಾ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೋ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ.ಹರೀಶ್ ಕುಮಾರ್‍ರವರು ಜಂಟಿಯಾಗಿ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಿಥುನ್ ರೈ ಅವರ ಪರವಾಗಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಹಳೇ ಬಂದರು ನೌಕರರ ಶ್ರಮಿಕ ಸಂಘದ ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಹಳೇ ಬಂದರಿನ ಅಭಿವೃದ್ದಿ, ಇ.ಎಸ್.ಐ ಆಸ್ಪತ್ರೆಯ ಉನ್ನತೀಕರಣ, ಶ್ರಮಿಕ ಸಂಘದ ಶ್ರೇಯೋಭಿವೃದ್ದಿಗೋಸ್ಕರ ಹಾಗೂ ಬಂದರಿನ ಸಮಸ್ಯೆಗಳ ಪರಿಹಾರಕ್ಕೋಸ್ಕರ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ಎಂ ರೈಯವರು ಶ್ರಮಿಸಲು ಸದಾ ಸಿದ್ದರಾಗಿದ್ದಾರೆ ಎಂದು ಶ್ರೀ.ಜೆ.ಆರ್.ಲೋಬೋ ಹಾಗೂ ಶ್ರೀ.ಹರೀಶ್ ಕುಮಾರ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರಮಿಕ ಸಂಘದ ಮುಖಂಡ ಶ್ರೀ ಇಂತಿಯಾಜ್ , ಮಾಜಿ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…