Featured

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ : ಮಿಥುನ್‍ ರೈ ಪರ ಲೋಬೊ, ಹರೀಶ್‍ಕುಮಾರ್ ಪ್ರಚಾರ -Vishwanews24

ಮಂಗಳೂರು:ಹಳೇ ಬಂದರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮಂಗಳೂರು ದಕ್ಷಿಣ ವಿಧಾನಸಭಾ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೋ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ.ಹರೀಶ್ ಕುಮಾರ್‍ರವರು ಜಂಟಿಯಾಗಿ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಿಥುನ್‍ ರೈ ಅವರ ಪರವಾಗಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಹಳೇ ಬಂದರು ನೌಕರರ ಶ್ರಮಿಕ ಸಂಘದ ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಹಳೇ ಬಂದರಿನ ಅಭಿವೃದ್ದಿ, ಇ.ಎಸ್.ಐ ಆಸ್ಪತ್ರೆಯ ಉನ್ನತೀಕರಣ, ಶ್ರಮಿಕ ಸಂಘದ ಶ್ರೇಯೋಭಿವೃದ್ದಿಗೋಸ್ಕರ ಹಾಗೂ ಬಂದರಿನ ಸಮಸ್ಯೆಗಳ ಪರಿಹಾರಕ್ಕೋಸ್ಕರ ಕಾಂಗ್ರೆಸ್‍ ಅಭ್ಯರ್ಥಿ ಮಿಥುನ್ ಎಂ ರೈಯವರು ಶ್ರಮಿಸಲು ಸದಾ ಸಿದ್ದರಾಗಿದ್ದಾರೆ ಎಂದು ಶ್ರೀ.ಜೆ.ಆರ್.ಲೋಬೋ ಹಾಗೂ ಶ್ರೀ.ಹರೀಶ್ ಕುಮಾರ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರಮಿಕ ಸಂಘದ ಮುಖಂಡ ಶ್ರೀ ಇಂತಿಯಾಜ್ , ಮಾಜಿ ಕಾರ್ಪೋರೇಟರ್‍ ಅಬ್ದುಲ್ ಲತೀಫ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago