Featured

ಕಾಂಗ್ರೆಸ್ ಪಕ್ಷದ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ : ಸಿದ್ದರಾಮಯ್ಯ – Vishwanews24

ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ : ಸಿದ್ದರಾಮಯ್ಯ – Vishwanews24

ಬೆಂಗಳೂರು: ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀಮತಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಈ ನಾಡಿಗಾಗಿ, ನಾಡಿನ ಏಳಿಗೆಗಾಗಿ ತಮ್ಮ ಇಡೀ ಬದುಕು ಸವೆಸಿದವರು. ಇದು ಅಮ್ಮ-ಮಗ ತಮ್ಮ ರಕ್ತ ಬಸಿದು, ಪ್ರಾಣ ತೆತ್ತು ಕಟ್ಟಿದ ಪಕ್ಷ. ಅವರು ಪ್ರಾಣ ಕಳೆದುಕೊಂಡರು, ದೇಶ ಉಳಿಸಿದರು. ಆದರೆ ಇಂದು ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ 137 ಸಂಸ್ಥಾಪನಾ ದಿನದ ಶುಭ ಹಾರೈಕೆ ಕೋರಿ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಆರೆಸೆಸ್ಸೆ ವಿರುದ್ದ ಕಿಡಿಕಾರಿದ್ದಾರೆ. “ಆಧುನಿಕ ಭಾರತದ ಇತಿಹಾಸವೆಂದರೆ ಅದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇತಿಹಾಸವೇ ಆಗಿದೆ. ಅದು ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಉಳಿಸಿದ ಮತ್ತು ಸ್ವಾತಂತ್ರ್ಯಾ ನಂತರ ದೇಶ ಕಟ್ಟಿದ ಇತಿಹಾಸವೂ ಹೌದು.ಸ್ವಾತ್ರಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷಾಂತರ ದೇಶಪ್ರೇಮಿ ಸದಸ್ಯರು ಗುಂಡಿಗೆ ಎದೆ ಕೊಟ್ಟರು, ಹಲವರು ಲಾಠಿಗೆ ಎದೆ ಕೊಟ್ಟರು, ಸಾವಿರಾರು ಜನ ಹುತಾತ್ಮರಾದರು, ಕಾಂಗ್ರೆಸ್ ಪಕ್ಷದ ಈ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ”

“ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಹಾಗೂ ಪ್ರಸ್ತುತ ರಾಹುಲ್ ಗಾಂಧಿ ಅವರು ಪ್ರತಿಪಾದಿಸುತ್ತಿರುವ ವಿಚಾರಧಾರೆಗಳಿಗೆ ಅನುಗುಣವಾಗಿ ನವಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ” ಎಂದು ತಿಳಿಸಿದ್ದಾರೆ.

“ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ, ಕೈಗೆ ಕೈ ಜೋಡಿಸಿ ನವ ಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸಲು ನಾವು ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

7 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

7 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

7 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

7 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago