Featured

ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ : ರಾಹುಲ್ ಗಾಂಧಿ – Vishwanews24

ಇಡಿ ವಿಚಾರಣೆ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ..

ಕಾಂಗ್ರೆಸ್ ಅನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಗೊತ್ತಿದೆ..

ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ರಾಹುಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಇತ್ತೀಚೆಗೆ ಐದು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು ತನ್ನ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಬುಧವಾರ ಹೇಳಿದ್ದಾರೆ.

ಇಡಿ (ED) ಮತ್ತು ಅಂತಹ ಸಂಸ್ಥೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ, ನನ್ನನ್ನು ವಿಚಾರಣೆ ನಡೆಸಿದ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅರ್ಥಮಾಡಿಕೊಂಡರು ಎಂದು ಬುಧವಾರ ಮಧ್ಯಾಹ್ನ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ರಾಹುಲ್ ಹೇಳಿದ್ದಾರೆ.

ಇಡಿ ವಿಚಾರಣೆ ವೇಳೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ರಾಹುಲ್, ನಾನು ಒಬ್ಬಂಟಿ ಅಲ್ಲ, ನಾವೆಲ್ಲರೂ ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಟೀಕಿಸಿ ಕಾಂಗ್ರೆಸ್ ನಾಯಕ ನಾವು ಸೇನಾಪಡೆಗಳನ್ನು ಬಲಪಡಿಸಬೇಕಿದೆ ಆದರೆ ಸರ್ಕಾರ ಅದನ್ನು ದುರ್ಬಲವನ್ನಾಗಿ ಮಾಡುತ್ತಿದೆ.ಯುದ್ಧದ ವೇಳೆ ಇದರ ಪರಿಣಾಮ ಗೊತ್ತಾಗುತ್ತದೆ ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

23 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

24 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

24 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago